ಮೂರು ಮಕ್ಕಳು ಮೃತಪಟ್ಟ ಬಳಿಕ ಎಚ್ಚೆತ್ತ ಪಾಲಿಕೆಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಗಚ್ಚಿನಕಟ್ಟಿ ಕಾಲೋನಿಯ ಮೂರು ಮಕ್ಕಳು ಮೃತಪಟ್ಟ ಬಳಿಕ ವಿಜಯಪುರ ಮಹಾನಗರ ಪಾಲಿಕೆ ಎಚ್ಚೆತ್ತುಕೊಂಡಿದೆ. ಇಂಡಿ ರಸ್ತೆಯಲ್ಲಿರುವ ತ್ಯಾಜ್ಯ ನೀರು ಶುದ್ಧೀಕರಣ ಘಟಕದ ಸುತ್ತಲೂ ತಂತಿ ಬೇಲಿ ಹಾಕಿಸಿದ್ದು, ಗೇಟ್ ಕೂಡ ಅಳವಡಿಸಿದ್ದಾರೆ. ಸುರಕ್ಷತೆಯ ದೃಷ್ಟಿಯಿಂದ ಘಟಕದ ಆವರಣದಲ್ಲಿ ಸಿಸಿಟಿವಿ ಹಾಗೂ ಭದ್ರತಾ ಸಿಬ್ಬಂದಿ ನೇಮಿಸಲಾಗಿದೆ. ಇದರಿಂದಾಗಿ ಆ ರಸ್ತೆಯಲ್ಲಿ ಶಾಲೆಗೆ ಹೋಗುವ ಮಕ್ಕಳ ಪಾಲಕರು ಇದೀಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.