ಶರಣರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಿಕನ್ನಡಪ್ರಭ ವಾರ್ತೆ ವಿಜಯಪುರ: ಶರಣರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು. ಬಬಲೇಶ್ವರ ತಾಲೂಕಿನ ಕೊಡಬಾಗಿ ಗ್ರಾಮದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ನಿರ್ಮಿಸಲಾಗಿರುವ ಅಕ್ಕಮಹಾದೇವಿ ದೇವಸ್ಥಾನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಅಕ್ಕಮಹಾದೇವಿ ನಮಗೆಲ್ಲರಿಗೂ ತಮ್ಮ ಆಚಾರ, ವಿಚಾರ, ವಚನಗಳ ಮೂಲಕ ಮಾದರಿಯಾಗಿದ್ದಾರೆ. ಶರಣ, ಶರಣೆಯರ ದೇವಸ್ಥಾನ ನಿರ್ಮಿಸುವುದರ ಜೊತೆಗೆ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಬಾಳು ಹಸನಾಗುತ್ತದೆ.