ಪುರಸಭೆಗೆ ಮೈಬೂಬ ಅಧ್ಯಕ್ಷ, ಪ್ರೀತಿ ಉಪಾಧ್ಯಕ್ಷೆಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪಟ್ಟಣದ ಜನರು ಕಾತುರದಿಂದ ಎದುರು ನೋಡುತ್ತಿದ್ದ ಮುದ್ದೇಬಿಹಾಳ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಡೆದಿದ್ದು, ನೂತನ ಅಧ್ಯಕ್ಷರಾಗಿ ಮೈಬೂಬ ಗೊಳಸಂಗಿ ಹಾಗೂ ಉಪಾಧ್ಯಕ್ಷರಾಗಿ ಪ್ರೀತಿ ದೇಗಿನಾಳ ಆಯ್ಕೆಯಾಗಿದ್ದಾರೆ. ಪುರಸಭೆ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಇಬ್ಬರು ಆಯ್ಕೆಯಾಗಿದ್ದಾಗಿ ಚುನಾವಣಾಧಿಕಾರಿ ಹಾಗೂ ತಹಸೀಲ್ದಾರ್ ಬಲರಾಮ ಕಟ್ಟಿಮನಿ ಘೋಷಿಸಿದರು.