ಇಂದು ಹೆಸ್ಕಾಂ ಕೇಂದ್ರ ಕಚೇರಿ ಮುಂದೆ ಪ್ರತಿಭಟನೆದೇಶದ ಬೆನ್ನೆಲಬು ರೈತರು ಎಂದು ಭಾಷಣ ಮಾಡುವ ಜನಪ್ರತಿನಿಧಿಗಳು, ಸರ್ಕಾರ ಇಂದು ರೈತರ ಪಂಪಸೆಟ್‌ಗಳಿಗೆ ಮೀಟರ್ ಅಳವಡಿಸಲು ಹೊರಟು ರೈತರ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುತ್ತಿದೆ. ಈ ಕುರಿತು ಸೆ.4 ರಂದು ವಿಜಯಪುರ ಹೆಸ್ಕಾಂ ಕೇಂದ್ರ ಕಚೇರಿ ಮುಂದೆ ರೈತರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಎಸ್.ಬಿ.ಕೆಂಬೋಗಿ ಹೇಳಿದರು.