ಟ್ರಾಫಿಕ್ ನಿಯಂತ್ರಣಕ್ಕೆ ರಸ್ತೆ ಎಸ್ಪಿ, ಹಲವರಿಗೆ ದಂಡವಿಜಯಪುರ: ನಗರದಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದ್ದು, ವಾಹನ ಸವಾರು, ಪಾದಾಚಾರಿಗಳು ಸಂಚಾರಕ್ಕೆ ಹರಸಾಹಸ ಪಡುತ್ತಿದ್ದಾರೆ. ಈ ಟ್ರಾಫಿಕ್ ತಾಪತ್ರಯ ತಪ್ಪಿಸಲು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಸ್ವತಃ ರಸ್ತೆಗಿಳಿದು ಕಾರ್ಯಾಚರಣೆ ನಡೆಸಿದರು. ನಗರದ ಗಾಂಧಿ ವೃತ್ತ, ಸರಾಫ್ ಬಜಾರ್, ವಾಜಪೇಯಿ ರಸ್ತೆ, ರಾಮ ಮಂದಿರ ರಸ್ತೆ, ಸಿದ್ದೇಶ್ವರ ದೇಗುಲ ರಸ್ತೆಗಳಲ್ಲಿ ಪರಿಶೀಲನೆ ನಡೆಸಿದರು. ಅಲ್ಲಿ ರಸ್ತೆ ಪಕ್ಕದಲ್ಲಿ ಅಡ್ಡಾದಿಡ್ಡಿಯಾಗಿ ನಿಲ್ಲಿಸಿದ ವಾಹನಗಳಿಗೆ ದಂಡ ಹಾಕಿ ಎಚ್ಚರಿಕೆ ನೀಡಿದ್ದಾರೆ.