ಇಲ್ಲಿವರೆಗೆ 52 ಬಾರಿ ಚುನಾವಣೆಯಲ್ಲಿ ದೀಪಕ ಸ್ಪರ್ಧೆ!ಚುನಾವಣೆಗಳು ಎಂದರೆ ಕೋಟಿ ಕೋಟಿ ಇದ್ದವರೇ ನಾ ಒಲ್ಲೆ ಎಂದು ಹಿಂದೆ ಸರಿಯುವ ಈ ಕಾಲದಲ್ಲಿ ಇಲ್ಲೊಬ್ಬ ವ್ಯಕ್ತಿ ಗ್ರಾಮ ಪಂಚಾಯತಿ, ಜಿಲ್ಲಾ ಪಂಚಾಯತಿ, ವಿಧಾನಸಭೆ, ಲೋಕಸಭೆ, ರಾಜ್ಯಸಭೆ ಸೇರಿದಂತೆ ಸಾರ್ವತ್ರಿಕ ಹಾಗೂ ಉಪ ಚುನಾವಣೆಗಳು ಸೇರಿದಂತೆ 52 ಬಾರಿ ಸ್ಪರ್ಧಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಆದರೆ, 52 ಬಾರಿಯೂ ಠೇವಣಿಯನ್ನೇ ಕಳೆದುಕೊಂಡು ಹೀನಾಯ ಸೋಲು ಅನುಭವಿಸಿದ್ದಾನೆ.