• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಮನವಿ
ತಾಲೂಕಿನ ಕೇಸಾಪೂರ ಗ್ರಾಮಗಳಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಅಕ್ರಮ ಮದ್ಯಮಾರಾಟ ತಡೆಗಟ್ಟುವಂತೆ ಆಗ್ರಹಿಸಿ ಕೇಸಾಪೂರ ಗ್ರಾಮದ ಮುಖಂಡರು ಮಂಗಳವಾರ ತಹಸೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಹಾಗೂ ತಾಲೂಕು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಗೋಲಗುಂಬಜ್ ಆವರಣದಲ್ಲಿ ಯೋಗ ದಿನ ಆಚರಣೆ
ನಗರದ ಗೋಲಗುಂಬಜ್ ಆವರಣದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.
ಹಣ ಕೊಟ್ಟರೆ ಟಿಸಿ ಬದಲು, ಇಲ್ಲದಿದ್ದರೆ ಎಲ್‌ಟಿ!
ಕನ್ನಡಪ್ರಭ ವಾರ್ತೆ ವಿಜಯಪುರ ಬಡ ಹಾಗೂ ಸಣ್ಣ ಹಿಡುವಳಿ ರೈತರಿಗೆ ಅನುಕೂಲವಾಗಲೆಂದು ಸರ್ಕಾರ ವಿವಿಧ ಯೋಜನೆಗಳಲ್ಲಿ ಬೋರ್‌ವೆಲ್ ಹಾಗೂ ವಿದ್ಯುತ್ ಸಂಪರ್ಕವನ್ನು ಉಚಿತವಾಗಿ ಕೊಡುತ್ತಿದೆ. ಆದರೆ, ಇದನ್ನು ಕಲ್ಪಿಸಬೇಕಿರುವ ಹೆಸ್ಕಾಂ ಮಾತ್ರ ಉಚಿತವಾಗಿ ರೈತರಿಗೆ ನೀಡದೇ ಇದರಲ್ಲೂ ಭಷ್ಟಚಾರ ನಡೆಸುತ್ತಿದೆ. ಹೊಸ ಟಿಸಿ (ವಿದ್ಯುತ್ ಟ್ರಾನ್ಸಫಾರ್ಮರ್‌) ಕೊಡಲು, ಕೆಟ್ಟಿರುವ ಟಿಸಿ ರಿಪೇರಿ ಮಾಡಿಸಿಕೊಡಲು ಕೆಲವು ಕಡೆಗಳಲ್ಲಿ ಹಣ ಸುಲಿಗೆ ಮಾಡಲಾಗುತ್ತಿದೆ. ಸಾಕಷ್ಟು ಬಾರಿ ಎಚ್ಚರಿಸಿದರೂ ರೈತರಿಂದ ಹಣ ಪಡೆಯುವುದು ನಿಂತಿಲ್ಲ. ಈ ಕುರಿತು ಕೆಡಿಪಿ ಸಭೆಯಲ್ಲೇ ಸ್ವತಃ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಯೋಗ ಮಾನಸಿಕ, ದೈಹಿಕ ಆರೋಗ್ಯಕ್ಕೆ ಅವಶ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ಯೋಗವು ದೇಹ, ಮನಸ್ಸು ಮತ್ತು ಆತ್ಮಗಳ ಸಮ್ಮಿಲನವಾಗಿದ್ದು, ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಅನುಕೂಲವಾಗುತ್ತದೆ ಎಂದು ಬಿ.ಎಲ್.ಡಿ.ಇ. ಶರೀರಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿ ಖೋಡ್ನಾಪುರ ಹೇಳಿದರು.
ಸೇವೆಯಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಹಿರಿದು
ಕನ್ನಡಪ್ರಭ ವಾರ್ತೆ ವಿಜಯಪುರ ಸಮುದಾಯಕ್ಕೆ ಆರೋಗ್ಯ ಸೇವೆ ಒದಗಿಸುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಮುಖ್ಯವಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ ಹೇಳಿದರು. ನಗರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ .ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಆಯೋಜಿಸಲಾಗಿದ್ದ ಪ್ರಸೂತಿ ಮತ್ತು ಶಿಶುಗಳ ಆರೈಕೆ ಕುರಿತ ಆಶಾ ದೀಪ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಿತ್ಯ ಯೋಗದಿಂದ ಆಯುಷ್ಯ ವೃದ್ಧಿ: ನಿರಂಜನ ಶ್ರೀ
ಕನ್ನಡಪ್ರಭ ವಾರ್ತೆ ಆಲಮೇಲ: ನಿತ್ಯ ಯೋಗ ಹಾಗೂ ಪ್ರಾಣಾಯಾಮ ಮಾಡುವುದರಿಂದ ಮನುಷ್ಯನ ಆಯುಷ್ಯ ವೃದ್ಧಿಯಾಗಲಿದೆ ಎಂದು ನಿರಂಜನ ಶ್ರೀಗಳು ಹೇಳಿದರು. ಪಟ್ಟಣದ ಶ್ರೀವಿಶ್ವೇಶ್ವರ ಬಾಲಭಾರತಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಯೋಗ ದಿನೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು. ಶಾಲೆಯ ಯೋಗ ದಿನೋತ್ಸವದಲ್ಲಿ ಮಾತನಾಡಿದ ಅವರು, ಮಕ್ಕಳು ಪ್ರತಿನಿತ್ಯ ಬೆಳಿಗ್ಗೆ 5 ಗಂಟೆಗೆ ಎದ್ದು ನಿತ್ಯ ಕ್ರಮಗಳನ್ನು ಮುಗಿಸಿ 1ಕಿ.ಮೀ ಕ್ಕಿಂತ ಹೆಚ್ಚು ದೂರ ಓಡುವುದು ಜೊತೆಗೆ ದೈಹಿಕ ಕಸರತ್ತುಗಳು, ಪ್ರಾಣಾಯಾಮ, ಸೂರ್ಯ ನಮಸ್ಕಾರ ಮಾಡಬೇಕು.
ಸಂಗನಬಸವ ಶ್ರೀಗಳಿಂದ ಜಿಲ್ಲೆಯಲ್ಲಿ ಶೈಕ್ಷಣಿಕ ಕ್ರಾಂತಿ
ಕನ್ನಡಪ್ರಭ ವಾರ್ತೆ ಇಂಡಿ: ಬಂಥನಾಳದ ಸಂಗನಬಸವ ಮಹಾಶಿವಯೋಗಿಳು ಜೋಳಿಗೆ ಹಿಡಿದು ವಿಜಯಪುರ ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳು ತೆರೆಯದಿದ್ದರೆ ವಿಜಯಪುರ ಜಿಲ್ಲೆ ಶೈಕ್ಷಣಿಕ ಕ್ಷೇತ್ರದಲ್ಲಿ ತೀರಾ ಹಿಂದುಳಿಯುತ್ತಿತ್ತು. ವಿಜಯಪುರ ಜಿಲ್ಲೆಯ ಶೈಕ್ಷಣಿಕ ಕ್ರಾಂತಿಗೆ ಸಂಗನಬಸವ ಮಹಾಶಿವಯೋಗಿಗಳ ಕೊಡುಗೆ ಬಹಳಷ್ಟಿದೆ. ಹೀಗಾಗಿ, ಭತಗುಣಕಿ ಗ್ರಾಮದಲ್ಲಿನ ಶೈಕ್ಷಣಿಕ ಸಂಸ್ಥೆಗೆ ಜಾಗ ದಾನ ಮಾಡಿದ ಸಂಭಾಜಿರಾವ ಮಿಸಾಳೆ ಅವರ ಶಿಕ್ಷಣ ಪ್ರೇಮ ಶ್ಲಾಘನೀಯವಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಮೆಚ್ಚುಗೆ ವ್ಯಕ್ತಪಡಿಸಿದರು.
ಅಧಿಕಾರಿಗಳ ಮನವೊಲಿಕೆ: ಪಟ್ಟು ಬಿಡದ ಗುತ್ತಿಗೆದಾರರು
ಕನ್ನಡಪ್ರಭ ವಾರ್ತೆ ಆಲಮಟ್ಟಿ: ಗುತ್ತಿಗೆದಾರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಇಲ್ಲಿಯ ಮುಖ್ಯ ಎಂಜಿನಿಯರ್ ಕಚೇರಿಯ ಎದುರಿಗೆ ನಡೆಸುತ್ತಿರುವ ಅಹೋರಾತ್ರಿ ಧರಣಿ ಸ್ಥಳಕ್ಕೆ ಸೋಮವಾರ ಕೆಬಿಜೆಎನ್ಎಲ್ ವಿವಿಧ ಅಧಿಕಾರಿಗಳು ಭೇಟಿ ನೀಡಿ ಧರಣಿ ಹಿಂಪಡೆಯುವಂತೆ ಧರಣಿ ನಿರತರಲ್ಲಿ ಮನವಿ ಮಾಡಿದರು.
ಕಚೇರಿಯಲ್ಲಿ ನಿಂದಿಸಿದ ನೌಕರಳ ವರ್ಗಾವಣೆಗೆ ಆಗ್ರಹ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ:ತಾಲೂಕು ಸಮಾಜ ಕಲ್ಯಾಣ ಕಚೇರಿಯಲ್ಲಿ ಸಿಪಾಯಿಯಾಗಿರುವ ದಿನಗೂಲಿ ನೌಕರಳಾಗಿರುವ ಮಹಿಳೆಗೆ ಪ್ರಥಮ ದರ್ಜೆ ಸರ್ಕಾರಿ ನೌಕರರಾಗಿರುವ ಶೋಭಾ ಬೈರಗೊಂಡ ಎನ್ನುವರು ಜಾತಿ ನಿಂದನೆ ಮಾಡುತ್ತಿದ್ದಾರೆ. ಅವರನ್ನು ಕೂಡಲೇ ಕರ್ತವ್ಯದಿಂದ ಅಮಾನತು ಮಾಡಿ ಬೇರೆಡೆ ವರ್ಗಾವಣೆ ಮಾಡುವಂತೆ ಒತ್ತಾಯಿಸಿ ವಿವಿಧ ದಲಿತ ಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಸಮಾಜ ಕಲ್ಯಾಣ ಇಲಾಖೆ ಕಚೇರಿ ಮುಂದೆ ಧರಣಿ ನಡೆಸಿದರು. ಕೂಡಲೇ ಮೇಲಾಧಿಕಾರಿಗಳು ಕ್ರಮಕೈಗೊಳ್ಳುವಂತೆ ಎಚ್ಚರಿಕೆಯನ್ನು ನೀಡಿದ್ದಾರೆ.
ಮಾವಾದಲ್ಲಿ ಗಾಂಜಾ ಸೇರಿಸಿ ಮಾರಾಟ: ಕ್ರಮಕ್ಕೆ ಮಹಿಳೆಯರ ಆಗ್ರಹ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ದೇವೂರ ಗ್ರಾಮದಲ್ಲಿ ಅಕ್ರಮ ಮದ್ಯ ಮತ್ತು ಮಾವಾದಲ್ಲಿ ಗಾಂಜಾ ಮಿಕ್ಸ್ ಮಾಡಿ ಮಾರಾಟ ಮಾಡಲಾಗುತ್ತಿದ್ದು, ಇದನ್ನು ತಡೆದು ಮಾರಾಟಗಾರರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮಹಿಳಾ ಘಟಕದಿಂದ ತಹಸೀಲ್ದಾರ್‌ಗೆ ದೂರು ನೀಡಲಾಯಿತು.
  • < previous
  • 1
  • ...
  • 250
  • 251
  • 252
  • 253
  • 254
  • 255
  • 256
  • 257
  • 258
  • ...
  • 398
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved