ನೋಂದಣಾಧಿಕಾರಿ ಕಚೇರಿಯಲ್ಲಿನ ಅಕ್ರಮ ತಡೆಗಟ್ಟಿಕಳೆದ ಏಳು ವರ್ಷಗಳಿಂದ ಜಿಲ್ಲೆಯ ನೋಂದಣಾಧಿಕಾರಿಗಳು ವಿಜಯಪುರ ನಗರದಲ್ಲಿ ಕಾರ್ಯನಿರ್ವಹಿಸಿದ್ದು, ಅಕ್ರಮ ಪ್ರಕರಣಗಳಿಗೆ ಕುಮಕ್ಕು ನೀಡುತ್ತಿದ್ದಾರೆ. ಇವರ ಜೊತೆ ಹಲವಾರು ಜನ ಕೈ ಜೋಡಿಸಿ ಅಮಾಯಕ ಬಡ ಜನರ ನಕಲಿ ದಾಖಲೆ ಸೃಷ್ಟಿಸಿ ಕೊಳ್ಳೆ ಹೊಡೆಯುತ್ತಿದ್ದು, ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತಾಲೂಕು ಮತ್ತು ಜಿಲ್ಲೆಯಲ್ಲಿ ವಿಶೇಷ ತನಿಖಾ ತಂಡವನ್ನು ರಚನೆ ಮಾಡಿ ತಕ್ಷಣದಿಂದ ಕಾರ್ಯ ಪ್ರವೃತ್ತರಾಗಬೇಕು ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.