ಎಗ್ಗಿಲ್ಲದೇ ನಡೆದಿದೆ ಅನಧಿಕೃತ ಗ್ಯಾಸ್ ರಿಫಿಲ್ಲಿಂಗ್ ದಂಧೆ!ಬಡವರ ಮನೆ ಸೇರಬೇಕಿದ್ದ ಅಡುಗೆ ಅನಿಲ ಬಳಸಿಕೊಂಡು ನಗರದಲ್ಲಿ ಎಲ್ಲೆಂದರಲ್ಲಿ ಎಲ್ಪಿಜಿ ಹೊಂದಿರುವ ಆಟೋಗಳಿಗೆ, ಗ್ಯಾಸ್ ಸ್ಟೋವ್ಗಳಿಗೆ, ಅನಧಿಕೃತವಾಗಿ ಗ್ಯಾಸ್ ರಿಫಿಲ್ಲಿಂಗ್ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಈ ಅಕ್ರಮ ದಂಧೆ ರಾಜಾರೋಷವಾಗಿಯೇ ನಗರದ ಪ್ರಮುಖ ರಸ್ತೆಗಳ ಪಕ್ಕದಲ್ಲಿ, ಜನನಿಬಿಡ ಪ್ರದೇಶಗಳಲ್ಲೇ ನಡೆಯುತ್ತಿದ್ದರೂ ಸಂಬಂಧಿಸಿದ ಅಧಿಕಾರಿಗಳು ಮಾತ್ರ ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಿದ್ದಾರೆ.