.ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ: ಡಿಸಿ ಭೂಬಾಲನ್ವಿಜಯಪುರ: ಮಾ.25 ರಿಂದ ಏ.6ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿದ್ದು, ವ್ಯವಸ್ಥಿತ ಹಾಗೂ ಸೂಸೂತ್ರ ಪರೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚಿಸಿದರು. ಸೋಮವಾರ ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 127 ಪರೀಕ್ಷಾ ಕೇಂದ್ರ ತೆರೆಯಲಾಗಿದ್ದು, ಒಟ್ಟು 41,749 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.