ರಮೇಶ ಜಿಗಜಿಣಗಿ ವಿರುದ್ಧ ಬಂಜಾರ ಸಮುದಾಯ ಕೆಂಡಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ಬಂಜಾರ ಸಮಾಜದ ಕುರಿತು ಅತ್ಯಂತ ಕೀಳಾಗಿ ಮಾತಾಡಿದ್ದಾರೆ ಎಂದು ಆರೋಪಿಸಿ ಬಂಜಾರ ಸಮಾಜದ ಮುಖಂಡರು ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಗರಂ ಆಗಿದ್ದಾರೆ. ಅವರ ಹೇಳಿಕೆಯನ್ನು ಖಂಡಿಸಿರುವ ಸಮುದಾಯದ ಮುಖಂಡರು, ಚುನಾವಣೆಯಲ್ಲಿ ಜಿಣಜಿಣಗಿಗೆ ತಕ್ಕ ಪಾಠ ಕಲಿಸುವಂತೆ ಮಾಜಿ ಜಿಪಂ ಅಧ್ಯಕ್ಷ ಹಾಗೂ ಅಖಿಲ ಕರ್ನಾಟಕ ಬಂಜಾರ ಮಹಾಸಭಾ ಅಧ್ಯಕ್ಷ ಅರ್ಜುನ ರಾಠೋಡ ಕರೆ ನೀಡಿದರು