ಶಾಸಕ ಯತ್ನಾಳ ಭರವಸೆ ಹಿನ್ನೆಲೆಯಲ್ಲಿ ಧರಣಿ ಅಂತ್ಯನಗರದ ಮನಗೂಳಿ ಅಗಸಿ ಬಳಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಹಾಗೂ ಭವನಕ್ಕೆ ಹೆಚ್ಚುವರಿ ಜಾಗ ನೀಡಲು ಒತ್ತಾಯಿಸಿ, ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘದ ವತಿಯಿಂದ 29 ದಿನಗಳಿಂದ ನಿರಂತರವಾಗಿ ನಡೆಯುತ್ತಿದ್ದ ಧರಣಿ ಸ್ಥಳಕ್ಕೆ, ಮಂಗಳವಾರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೇಟಿ ನೀಡಿ ಭವನ ನಿರ್ಮಾಣ ಮಾಡುವ ಕುರಿತು ಭರವಸೆ ನೀಡಿದ ಹಿನ್ನೆಲೆಯಲ್ಲಿ ಸುದೀರ್ಘ ಧರಣಿ ಸತ್ಯಾಗ್ರಹ ಕೈಬಿಡಲಾಯಿತು.