ಬಿಜೆಪಿಯಿಂದ ಲಂಬಾಣಿ ಜನಾಂಗಕ್ಕೆ ಅನ್ಯಾಯಮುದ್ದೇಬಿಹಾಳ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಒಂದೆರಡು ಸಮುದಾಯಗಳ ಓಲೈಸಿಕೊಳ್ಳಲು ಒಳ ಮೀಸಲಾತಿ ಜಾರಿಗೊಳಿಸುವ ಮೂಲಕ ರಾಜ್ಯದ ಎಲ್ಲ ತಾಂಡಾಗಳ ಲಂಬಾಣಿ ಜನಾಂಗಕ್ಕೆ ಬಿಜೆಪಿ ಸರ್ಕಾರದ ಅನ್ಯಾಯ ಮಾಡಿದೆ. ಸಂವಿಧಾನ ವಿರೋಧಿ ನೀತಿ ಅನುಸರಿಸಿದ್ದಲ್ಲದೇ ಜಾತಿ, ಜಾತಿಗಳ ಮಧ್ಯೆ ವೈಷಮ್ಯ ಸೃಷ್ಟಿಸಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಪ್ರಯತ್ನ ನಡೆಸಿದೆ ಎಂದು ಬಂಜಾರ ಸಮಾಜದ ರಾಜ್ಯಾಧ್ಯಕ್ಷ ಅರ್ಜುನ ರಾಠೋಡ ಆರೋಪಿಸಿದರು.