ಸಮಾಜಮುಖಿ ಚಿಂತನೆಯಡಿ ನಿವೃತ್ತಿ ಜೀವನ ಸಾಗಲಿಕನ್ನಡಪ್ರಭ ವಾರ್ತೆ ಇಂಡಿಸಾರಿಗೆ ಇಲಾಖೆಯಲ್ಲಿ ಹಲವಾರು ತೊಂದರೆಗಳ ಮಧ್ಯ, ಸಾರ್ವಜನಿಕರಿಗೆ ಉತ್ತಮ ಸಾರಿಗೆ ಸೇವೆ ನೀಡಿ ಇತರರಿಗೆ ಸ್ಫೂರ್ತಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ನೌಕರರು ತಮ್ಮ ನಿವೃತ್ತಿ ಜೀವನವನ್ನು ಸಮಾಜಮುಖಿ ಚಿಂತನೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಬದುಕು ಸ್ವಾರ್ಥಕ ಮಾಡಿಕೊಳ್ಳಬೇಕು ಎಂದು ಈಶಾನ್ಯ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಜಯಪುರ ವಿಭಾಗೀಯ ಸಂಚಾರಿ ನಿಯಂತ್ರಣಾಧಿಕಾರಿ ಡಿ.ಎ.ಬಿರಾದಾರ ಶುಭ ಹಾರೈಸಿ, ಸಲಹೆ ನೀಡಿದರು.