ಸಿಎಂ ಕುರಿತ ಹೇಳಿಕೆ ಹಾಲುಮತ ಸಮಾಜಕ್ಕೆ ನೋವು ತಂದಿದೆಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಜಾತಿಗೆ ಸೀಮಿತವಾಗಿಲ್ಲ. ಎಲ್ಲ ಜನಾಂಗವನ್ನು ಒಟ್ಟೊಟ್ಟಿಗೆ ತೆಗೆದುಕೊಂಡು ಹೋಗುವ ಗುಣ ಅವರಲ್ಲಿದೆ. ಆದರೆ, ಈವರೆಗೆ ಮತಕ್ಷೇತ್ರದಲ್ಲಿ ಯಾವುದೇ ನಾಯಕರು ಸಿಎಂ ಬಗ್ಗೆ ಹಗುರವಾಗಿ ಮಾತನಾಡಿರಲಿಲ್ಲ. ಆದರೆ, ಮಾಜಿ ಶಾಸಕರು ಮಾತನಾಡಿರುವುದು ಹಾಲುಮತ ಸಮಾಜಕ್ಕೆ ನೋವು ತಂದಿದೆ. ಹೀಗಾಗಿ ಈ ಕೂಡಲೇ ಅವರು ಕ್ಷಮೆಯಾಚಿಸಬೇಕು ಎಂದು ಗೋವಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿದ್ದಣ್ಣ ಮೇಟಿ ಆಗ್ರಹಿಸಿದರು.