ದೇಶದ ಅಭ್ಯುದಯಕ್ಕೆ ಮತದಾನ ಹಕ್ಕು ಚಲಾಯಿಸಿ: ನ್ಯಾ.ಸಂತೋಷ ಕುಂದರ್ವಿಜಯಪುರ: ನಗರದ ಜಿಪಂ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ ಕುಂದರ್ ಮಾತನಾಡಿ, ದೇಶದ ಅಭ್ಯುದಯಕ್ಕೆ ಎಲ್ಲ ಅರ್ಹ ಮತದಾರರು ಮತದಾನದ ಹಕ್ಕು ಚಲಾಯಿಸಬೇಕು. ಸಂವಿಧಾನ ಕಲ್ಪಿಸಿದ ಮತದಾನದಿಂದ ಯಾರೂ ವಂಚಿತರಾಗದೇ ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಹೇಳಿದರು.