ಇಂದಿನ ಶಿಕ್ಷಣ ಪದ್ಧತಿಯಲ್ಲಿ ಮೌಲ್ಯಯುತ ಶಿಕ್ಷಣ ಅವಶ್ಯಕಗುಣಮಟ್ಟದ ಶಿಕ್ಷಣ ನೀಡಿ ಮಕ್ಕಳನ್ನು ಸಮಾಜದಲ್ಲಿ ಜವಾಬ್ದಾರಿಯುತ ವ್ಯಕ್ತಿಯನ್ನಾಗಿಸಿ, ಗೌರವಯುತ ಸ್ಥಾನದಲ್ಲಿ ಕೂರಿಸಬೇಕೆನ್ನುವುದು ಪ್ರತಿಯೊಬ್ಬ ತಂದೆ-ತಾಯಿಯರ ಕನಸಾಗಿರುತ್ತದೆ. ಹಾಗಾಗಿ ಶಿಕ್ಷಣವು ಮಕ್ಕಳಲ್ಲಿ ದೇಶಭಕ್ತಿ, ಶಿಸ್ತು, ಸಂಯಮ, ಸಂಸ್ಕಾರವನ್ನು ಸೃಷ್ಟಿಸುವುದರಿಂದ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬ ಮಕ್ಕಳಿಗೆ ಮೌಲ್ಯ ಶಿಕ್ಷಣದ ಅವಶ್ಯಕತೆ ಇದೆ ಎಂದು ಶ್ರೀ ಸಿದ್ದೇಶ್ವರ ಕೋಚಿಂಗ್ ಕ್ಲಾಸೆಸ್ ನ ಸಂಸ್ಥಾಪಕ ಅಧ್ಯಕ್ಷ ಸುರೇಶ್ ಜತ್ತಿ ಹೇಳಿದರು.