ಬರಕ್ಕೆ ಬಾಯ್ದೆರೆದ ಜಲಮೂಲಗಳು!ಬರದ ಹಣೆಪಟ್ಟಿ ಕಟ್ಟಿಕೊಂಡಿರುವ ವಿಜಯಪುರ ಜಿಲ್ಲೆಯಲ್ಲಿ ಈ ಬಾರಿಯೂ ಬರ ತಾಂಡವಾಡುತ್ತಿದೆ. ಇದರಿಂದ ರೈತರ ಬೆಳೆಗಳಿಗೆ ನೀರಿಲ್ಲದೇ ಬೆಳೆ ಹಾಳಾಗುತ್ತಿವೆ. ಇದರ ಬೆನ್ನಲ್ಲೇ ಅಂತರ್ಜಲ ಮಟ್ಟ ಕುಸಿತದ ಪರಿಣಾಮ ಇಂಡಿ ತಾಲೂಕಿನ ಕೆರೆ, ಬಾವಿಗಳಲ್ಲಿ ನೀರು ಮಾಯವಾಗಿದ್ದು, ಇದು ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.