ಜಿಲ್ಲೆಯ ಅಭಿವೃದ್ಧಿಗೆ ಜನಪ್ರತಿನಿಧಿಗಳು ಪಕ್ಷಾತೀತ ಒಂದಾಗಿಕನ್ನಡಪ್ರಭ ವಾರ್ತೆ ಇಂಡಿ ಜ್ಞಾನದಾಸೊಹಿ ಸಿದ್ದೇಶ್ವರ ಶ್ರೀಗಳು, ಬಸವಣ್ಣನವರು, ಬಂಥನಾಳದ ಸಂಗನಬಸವ ಸ್ವಾಮೀಜಿ, ವಚನ ಪಿತಾಮಹ ಫ.ಗು.ಹಳಕಟ್ಟಿ, ಭಾಸ್ಕರಾಚಾರ್ಯರಂತ ಶರಣರು ಹುಟ್ಟಿದ ಜಿಲ್ಲೆಯಲ್ಲಿ ಇತ್ತೀಚೆಗೆ ರಾಜಕೀಯ ಆರೋಪ ಪ್ರತ್ಯಾರೋಪದಿಂದ ಜಿಲ್ಲೆಯ ಹೆಸರು ಹಾಳಾಗುತ್ತಿದೆ. ರಾಜಕೀಯ ನಾಯಕರು, ಜನಪ್ರತಿನಿಧಿಗಳು ಸ್ವಪ್ರತಿಷ್ಠೆ ಬಿಟ್ಟು, ಜಿಲ್ಲೆಯ ಅಭಿವೃದ್ಧಿ ಕಡೆಗೆ ಗಮನ ಹರಿಸಬೇಕು ಎಂದು ರಾಜಕೀಯ ಯುವ ಚಿಂತಕರ ವೇದಿಕೆ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.