ಪಾರದರ್ಶಕ ಚುನಾವಣೆಗೆ ಅಗತ್ಯ ಸಿದ್ಧತೆಮೇ.7ರಂದು ನಡೆಯಲಿರುವ ವಿಜಯಪುರ ಮತಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಮುಕ್ತ, ನ್ಯಾಯಸಮ್ಮತ, ಪಾರದರ್ಶಕವಾಗಿ ಮತದಾನ ನಡೆಯುವ ನಿಟ್ಟಿನಲ್ಲಿ ಬಸವನಬಾಗೇವಾಡಿ ಮತಕ್ಷೇತ್ರದಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಆಲಮಟ್ಟಿ ಯುಕೆಪಿ ಭೂಸ್ವಾಧಿನಾಧಿಕಾರಿ, ಬಸವನಬಾಗೇವಾಡಿ ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಎಂ.ಗಂಗಪ್ಪ ಹೇಳಿದರು.