ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿಮಕ್ಕಳಿಗೆ ಮನೆಯಲ್ಲಿಯೇ ಶಿಕ್ಷಣದ ಜೊತೆಗೆ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ಹಾಗೂ ಬಸವಾದಿ ಶರಣರ ತತ್ವಾದರ್ಶಗಳನ್ನು ರೂಢಿಸಿಕೊಳ್ಳುವಂತೆ ತಿಳಿಹೇಳಬೇಕು. ಅಂದಾಗ ಮಾತ್ರ ದೇಶವನ್ನು ಸುಸಂಸ್ಕೃತ, ಸಮೃದ್ಧ ದೇಶವನ್ನಾಗಿ ಕಾಣಲು ಸಾಧ್ಯ ಎಂದು ಸಾಮಾಜಿಕ ಕಾರ್ಯಕರ್ತ ಶಾಂತಗೌಡ ಎಸ್.ಪಾಟೀಲ(ನಡಹಳ್ಳಿ) ಅಭಿಪ್ರಾಯಪಟ್ಟರು.