ನದಿಪಾತ್ರದ ರೈತರಿಗಿಲ್ಲ ಹಿಂಗಾರು ಬಿತ್ತನೆಗೆ ನೀರುಬರದ ಹಿನ್ನೆಲೆ ಜನ- ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಹಿಂಗಾರು ಬಿತ್ತನೆ ಹಾಗೂ ಭತ್ತ ನಾಟಿ ಮಾಡದಂತೆ ರೈತರಿಗೆ ಮಾಹಿತಿ ನೀಡಲಾಗಿದೆ. ಒಂದು ವೇಳೆ ರೈತರು ಪಂಪ್ಸೆಟ್ ಮೂಲಕ ನೀರು ಎತ್ತಿ ಭತ್ತ ನಾಟಿ ಮಾಡಲು ಮುಂದಾದರೆ ವಿದ್ಯುತ್ ಸಂಪರ್ಕ ಕಡಿತ ಮಾಡಲು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.