ಪೋಲಿಯೋ ತಡೆಗೆ ಮಕ್ಕಳಿಗೆ ಲಸಿಕೆ ಹಾಕಿಸಿಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ತಾಲೂಕು ವೈದ್ಯಾಧಿಕಾರಿ ಡಾ.ಎಸ್.ಎಸ್.ಓತಗೇರಿ, ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಸಾಬೀರ ಪಟೇಲ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.