ಪೌಷ್ಟಿಕ ಆಹಾರ ಸೇವಿಸಿ ಆರೋಗ್ಯವಾಗಿರಿ: ಡಾ.ಮಿನಾಜವಿಜಯಪುರ: ಎಲ್ಲರೂ ಪೌಷ್ಟಿಕ ಆಹಾರ ಸೇವಿಸುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಿನಾಜ ಕಾಗದಕೋಟಿ ಹೇಳಿದರು. ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ನಗರದ ಕಾಲೇಜು ಆವರಣದಲ್ಲಿ ನಡೆದ ಐಕ್ಯೂಎಸಿ ಹಾಗೂ ರೆಡ್ ಕ್ರಾಸ್ ಘಟಕ ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಂಯುಕ್ತಾಶ್ರಯದಲ್ಲಿ ನಡೆದ ಆರೋಗ್ಯ ತಪಾಸಣೆ ಶಿಬಿರದಲ್ಲಿ ಮಾತನಾಡಿ ಆರೋಗ್ಯದ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.