• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಯಾಣಿಕರ ಸುರಕ್ಷತೆಯೇ ಚಾಲಕರ ಮೂಲ ಕರ್ತವ್ಯ: ಪರಮೇಶ್ವರ ಕವಟಗಿ
ವಿಜಯಪುರ: ಸಮಯ ಪ್ರಜ್ಞೆ, ಸಂಚಾರಿ ನಿಯಮ ಪಾಲನೆ, ಪ್ರಯಾಣಿಕರ ಸುರಕ್ಷತೆಗಳನ್ನು ಗಮನದಲ್ಲಿಟ್ಟುಕೊಂಡು ವಾಹನ ಚಲಾಯಿಸುವವನೇ ಉತ್ತಮ ಚಾಲಕ ಎಂದು ಗಾಂಧಿಚೌಕ ಸಂಚಾರಿ ಠಾಣೆಯ ವೃತ್ತ ಪೊಲೀಸ್ ನಿರೀಕ್ಷಕ ಪರಮೇಶ್ವರ ಕವಟಗಿ ಹೇಳಿದರು. ನಗರದ ಎ.ಎಸ್.ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಬಿ.ಎಲ್.ಡಿ.ಇ ಸಂಸ್ಥೆ ಹಾಗೂ ವಿಜಯಪುರ ಸಂಚಾರಿ ಪೊಲೀಸ್ ಠಾಣೆ ಆಶ್ರಯದಲ್ಲಿ ವಾಹನ ಚಾಲಕರಿಗಾಗಿ ನಡೆದ ಸಂಚಾರಿ ನಿಯಮಗಳ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಆತ್ಮವಿಶ್ವಾಸದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸನ್ನದ್ಧರಾಗಿ: ಎನ್.ಎಚ್.ನಾಗೂರ
ಆಲಮಟ್ಟಿ: ಏಕಾಗ್ರತೆ, ಆತ್ಮವಿಶ್ವಾಸದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸನ್ನದ್ಧರಾಗಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ಎಚ್.ನಾಗೂರ ಹೇಳಿದರು. ಸ್ಥಳೀಯ ಎಸ್.ವಿ.ವಿ.ಸಂಸ್ಥೆಯ ಮಂಜಪ್ಪ ಹರ್ಡೇಕರ್ ಸ್ಮಾರಕ ಸಂಯುಕ್ತ ಪಪೂ ಕಾಲೇಜು ಪ್ರೌಢಶಾಲಾ ವಿಭಾಗದ ಶಾಲೆಗೆ ಗುರುವಾರ ಭೇಟಿ ನೀಡಿ ಎಸ್ಸೆಸ್ಸೆಲ್ಸಿ ಮಕ್ಕಳೊಂದಿಗೆ ನಡೆಸಿದರು. ಇದು ನನ್ನ ಏಳಿಗೆ, ನನ್ನ ಪ್ರಗತಿ, ನನ್ನ ಜ್ಞಾನ ಎಂದು ನಿಮ್ಮ ಸಾಮರ್ಥ್ಯ ಓರೆಗಲ್ಲಿಗೆ ಹಚ್ಚಿ. ಶಿಕ್ಷಣದಲ್ಲಿ ವಿಶೇಷ ಪ್ರಗತಿ ಕಾಣಬೇಕು. ಇದರಿಂದ ಯಶಸ್ಸು ತಮ್ಮದಾಗುತ್ತದೆ. ಸ್ಪಷ್ಟ ಓದು, ಬರಹದ ಪ್ರಭುತ್ವತೆಯೇ ಶೈಕ್ಷಣಿಕ ಪ್ರಗತಿಗೆ ಕಾರಣವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ತಿಳಿಪಡಿಸಿದರು.
ಅಂಬೇಡ್ಕರ್‌ ಭಾವಚಿತ್ರಕ್ಕೆ ಅವಮಾನ: ಆರೋಪಿಗಳ ಬಂಧನಕ್ಕೆ ಆಗ್ರಹ
ಇಂಡಿ: ಕಲಬುರಗಿ ನಗರದ ಕೋಟನೂರ ಬಡಾವಣೆಯಲ್ಲಿ ಡಾ.ಬಿ.ಆರ್‌.ಅಂಬೇಡ್ಕರ ಮೂರ್ತಿಗೆ ಅವಮಾನ ಮಾಡಿದ ದುಷ್ಕರ್ಮಿಗಳಿಗೆ ಗಲ್ಲು ಶಿಕ್ಷೆಗೆ ಗುರಿ ಪಡಿಸಬೇಕು ಎಂದು ಆಗ್ರಹಿಸಿ ಆರ್‌ಪಿಐ (ಅಟವಲೆ) ಮುಖಂಡರು ಗುರುವಾರ ಪಟ್ಟಣದಲ್ಲಿ ಪ್ರತಿಭಟಿಸಿದರು.
ಐತಿಹಾಸಿಕ ವಾಸ್ತುಶಿಲ್ಪಕ್ಕೆ ವಿಶ್ವಕರ್ಮರ ಕೊಡುಗೆ ಅಪಾರ: ಶಾಸಕ ನಾಡಗೌಡ
ಮುದ್ದೇಬಿಹಾಳ: ನಾಡಿನ ಐತಿಹಾಸಿಕ ವಾಸ್ತುಶಿಲ್ಪ ಪರಂಪರೆಗೆ ಶಿಲ್ಪಗಳ ಕೊಡುಗೆ ಅಪಾರವಾದುದು. ಅಂತಹ ಅಪರೂಪದ ಕೊಡುಗೆಯನ್ನು ನಾಡಿಗೆ ನೀಡಿ ತಮ್ಮ ಕಲಾ ಕೌಶಲ್ಯ ಕೊಡುಗೆಯನ್ನು ನಾಡಿಗೆ ನೀಡಿ ಅಜರಾಮರನಾದವನು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿಯವರು ಎಂದು ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು. ಪಟ್ಟಣದ ಮಾರುತಿ ನಗರದಲ್ಲಿ ತಾಲೂಕು ವಿಶ್ವಕರ್ಮ ಸಮಾಜದಿಂದ ಬುಧವಾರ ಹಮ್ಮಿಕೊಂಡಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರ್ಯರ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜೆಜೆಎಂ ಯೋಜನೆಯಿಂದ ಕುಡಿವ ನೀರಿನ ಸಮಸ್ಯೆ ದೂರ: ಸುನೀಲಗೌಡ ಪಾಟೀಲ
ವಿಜಯಪುರ: ಜಲಧಾರೆ ಯೋಜನೆ ಪೂರ್ಣಗೊಂಡ ನಂತರ ಗ್ರಾಮೀಣ ಭಾಗದ ಕುಡಿಯುವ ನೀರಿನ ಸಮಸ್ಯೆ ಶಾಶ್ವತವಾಗಿ ಬಗೆಹರಿಯಲಿದೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ತಿಳಿಸಿದರು. ತಿಕೋಟಾ ತಾಲೂಕಿನ ಅರಕೇರಿ, ಜಾಲಗೇರಿ ಹಾಗೂ ಟಕ್ಕಳಕಿಯಲ್ಲಿ ಜಲಜೀವನ್ ಮಿಷನ್(ಜೆಜೆಎಂ) ಯೋಜನೆಯ ಅಂಗವಾಗಿ ಮನೆಮನೆಗಳಿಗೆ ಕುಡಿಯುವ ನೀರು ಪೂರೈಸುವ ನಳಗಳ ಸಂಪರ್ಕ ಕಾಮಗಾರಿಗಳಿಗೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.
ಪೃಥ್ವಿ ಹೆಗಡೆಗೆ ಹೊಯ್ಸಳ ಕೆಳದಿ ಚೆನ್ನಮ್ಮ ಪ್ರಶಸ್ತಿ
ತಾಳಿಕೋಟೆ: ಪಟ್ಟಣದ ಶ್ರೀ ವಿರಕ್ತೇಶ್ವರ ಭರತನಾಟ್ಯ ತರಬೇತಿ ಸಂಸ್ಥೆ ೭ ವರ್ಷದಿಂದ ಭರತನಾಟ್ಯ ಹಾಗೂ ಜನಪದ ನೃತ್ಯ ತರಬೇತಿ ಪಡೆದ ಕುಮಾರಿ ಪೃಥ್ವಿ ಹೆಗಡೆಗೆ ಗುರುವಾರ ವಿಜಯಪುರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಆಯೋಜಿಸಲಾಗಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ಹೊಯ್ಸಳ ಕೆಳದಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಜ್ಯೋತಿ ರಥ ಯಾತ್ರೆ ಅದ್ಧೂರಿ ಸ್ವಾಗತಕ್ಕೆ ನಿರ್ಧಾರ
ದೇವರಹಿಪ್ಪರಗಿ: ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಸಂದ ಹಿನ್ನೆಲೆಯಲ್ಲಿ ಜ್ಯೋತಿ ರಥ ಯಾತ್ರೆಯು ಜ.27ರಂದು ಪಟ್ಟಣಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಥಯಾತ್ರೆಯನ್ನು ಅದ್ಧೂರಿಯಾಗಿ ಸ್ವಾಗತಿಸಲು ಹಾಗೂ ಜ.28ರಂದು ಅದ್ಧೂರಿಯಾಗಿ ಮೆರವಣಿಗೆ ಮಾಡಲು ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ಸರ್ಕಾರದ ನಿರ್ದೇಶನದಂತೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರ್ಣಗೊಂಡಿರುವ ಪ್ರಯುಕ್ತ ಕರ್ನಾಟಕ ಸಂಭ್ರಮ 50 ಹೆಸರಾಯಿತು ಕರ್ನಾಟಕ ಉಸಿರಾಯಿತು ಕನ್ನಡ ಎಂಬ ಹೆಸರಿನಲ್ಲಿ ಈ ವರ್ಷ ಕರ್ನಾಟಕ ಇತಿಹಾಸ, ಕಲೆ ಸಾಹಿತ್ಯ, ಸಾಂಸ್ಕೃತಿಕ ಹಾಗೂ ನಾಡು ನುಡಿಗೆ ಸಂಬಂಧಿಸಿದಂತೆ ಯುವ ಜನತೆಯಲ್ಲಿ ಕನ್ನಡ-ಕನ್ನಡಿಗ ಕರ್ನಾಟಕದ ಅರಿವು ಮೂಡಿಸುವ ನಿಟ್ಟಿನಲ್ಲಿ ಕರ್ನಾಟಕ ಸಂಭ್ರಮ 50 ರ ಜ್ಯೋತಿ ರಥ ಯಾತ್ರೆ ಆರಂಭಗೊಂಡಿದೆ.
ದೇಶದ ಅಭ್ಯುದಯಕ್ಕೆ ಮತದಾನ ಹಕ್ಕು ಚಲಾಯಿಸಿ: ನ್ಯಾ.ಸಂತೋಷ ಕುಂದರ್
ವಿಜಯಪುರ: ನಗರದ ಜಿಪಂ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ ಕುಂದರ್ ಮಾತನಾಡಿ, ದೇಶದ ಅಭ್ಯುದಯಕ್ಕೆ ಎಲ್ಲ ಅರ್ಹ ಮತದಾರರು ಮತದಾನದ ಹಕ್ಕು ಚಲಾಯಿಸಬೇಕು. ಸಂವಿಧಾನ ಕಲ್ಪಿಸಿದ ಮತದಾನದಿಂದ ಯಾರೂ ವಂಚಿತರಾಗದೇ ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಹೇಳಿದರು.
ಪ್ರತಿ ಮನೆಗೂ ನಳಗಳ ಸಂಪರ್ಕ ಒದಗಿಸಿ: ವಿಪ ಸದಸ್ಯ ಸುನೀಲಗೌಡ
ತಾಂತ್ರಿಕ ನೆಪಹೇಳಿ ಯಾವುದೇ ಕುಟುಂಬವನ್ನು ಕುಡಿಯುವ ನೀರಿನ ಸೌಲಭ್ಯದಿಂದ ವಂಚಿತರನ್ನಾಗಿ ಮಾಡಬಾರದು ಎಂದು ವಿಧಾನ ಪರಿಷತ್‌ ಶಾಸಕ ಸುನೀಲಗೌಡ ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆರೋಪಿಗಳನ್ನು ಗಡಿಪಾರು ಮಾಡಿ: ಧರ್ಮರಾಯ ಸಾಲೋಟಗಿ
ಕಲಬುರಗಿಯಲ್ಲಿ ಅಂಬೇಡ್ಕರ ಭಾವಚಿತ್ರಕ್ಕೆ ಅವಮಾನ ಮಾಡಿದವರನ್ನು ಕೂಡಲೇ ಬಂಧಿಸುವಂತೆ ದಲಿತ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಧರ್ಮರಾಯ ಸಾಲೋಟಗಿ ಆಗ್ರಹಿಸಿದರು.
  • < previous
  • 1
  • ...
  • 336
  • 337
  • 338
  • 339
  • 340
  • 341
  • 342
  • 343
  • 344
  • ...
  • 377
  • next >
Top Stories
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಕರ್ನಾಟಕ ಕ್ಷೇತ್ರದಲ್ಲಿ 1.5 ಲಕ್ಷ ಮತಕಳವು : ರಾಗಾ
ರಮ್ಯಾಗೆ ಕೀಳು ಸಂದೇಶ - ಇಬ್ಬರು ಅರೆಸ್ಟ್‌ : ಆರೋಪಿ ಕೂಲಿ ಕೆಲಸಗಾರರು
ಸಿಇಟಿ ಸೀಟು ಹಂಚಿಕೆಯ ಅಂತಿಮ ರಿಸಲ್ಟ್‌ ಪ್ರಕಟ: ಕಾಲೇಜು ಪ್ರವೇಶ ಶುರು
ಅಂಗನವಾಡಿಯಲ್ಲಿ ಮಕ್ಕಳ ಕೂಡಿ ಹಾಕಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved