ಬಾಕಿ ಬಿಲ್ ಬಿಡುಗಡೆಗಾಗಿ ಬೀದಿಗಿಳಿದ ಗುತ್ತಿಗೆದಾರರುಕನ್ನಡಪ್ರಭ ವಾರ್ತೆ ವಿಜಯಪುರ ಬಾಕಿ ಬಿಲ್ ಬಿಡುಗಡೆ ಮಾಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿಜಯಪುರ ಜಿಲ್ಲಾ ಗುತ್ತಿಗೆದಾರರ ಸಂಘದ ನೇತೃತ್ವದಲ್ಲಿ ಗುತ್ತಿಗೆದಾರರು ಬೃಹತ್ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ವ್ಯಾಪಾರಸ್ಥರ ಸಂಘ, ಜಿಲ್ಲಾ ನ್ಯಾಯವಾದಿಗಳ ಸಂಘ,ಸಿಮೆಂಟ್ ಡೀಲರ್ ಅಸೋಸಿಯೇಷನ್, ಸಿಮೆಂಟ್ ವರ್ತಕರು, ಎಪಿಎಂಸಿ ಮರ್ಚಂಟ್ಸ್ ಅಸೋಸಿಯೇಷನ್ ಸಂಘಟನೆಗಳ ಪದಾಧಿಕಾರಿಗಳು ಬೆಂಬಲ ವ್ಯಕ್ತಪಡಿಸಿದರು.