ಜಿ+1 ಮನೆಗಳಿಗೆ ಸೌಕರ್ಯ ನೀಡಿಕನ್ನಡಪ್ರಭ ವಾರ್ತೆ ವಿಜಯಪುರ ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ ವಿಜಯಪುರ ನಗರದ ಅಲ್ ಅಮೀನ್ ಮೆಡಿಕಲ್ ಕಾಲೇಜ್ ಹಿಂಭಾಗದ ನಮೋ ನಗರ ಪ್ರದೇಶದಲ್ಲಿ ನಿರ್ಮಾಣಗೊಳ್ಳುತ್ತಿರುವ ಜಿ ೧ ಮಾದರಿಯ ೧,೪೯೩ ಗುಂಪು ಮನೆಗಳ ಪೈಕಿ, ಈಗಾಗಲೇ ನಿರ್ಮಾಣಗೊಂಡ ೩೦೦ ಫಲಾನುಭವಿಗಳಿಗೆ ಅಂತಿಮ ಹಕ್ಕುಪತ್ರ ನೀಡಲಾಗಿದೆ. ಫಲಾನುಭವಿಗಳ ಅನುಕೂಲಕ್ಕಾಗಿ ಅಗತ್ಯ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಸಮರ್ಪಕ ವಿದ್ಯುತ್ ಸಂಪರ್ಕ ವ್ಯವಸ್ಥೆ ಕಲ್ಪಿಸುವುದು, ಬೀದಿ ದೀಪ ಹಾಗೂ ಒಳಚರಂಡಿ ವ್ಯವಸ್ಥೆಯನ್ನು ತ್ವರಿತವಾಗಿ ಒದಗಿಸಲು ಕ್ರಮಕೈಗೊಳ್ಳಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸೂಚಿಸಿದರು.