ರನ್ನ ಉತ್ಸವ ಯಶಸ್ಸಿಗೆ ಸಾರ್ವಜನಿಕರ ಸಹಕಾರ ಅಗತ್ಯಕನ್ನಡಪ್ರಭ ವಾರ್ತೆ ಮಹಾಲಿಂಗಪುರ (ರ-ಬ) ಫೆ.೨೨, 23ರಂದು ನಡೆಯುವ ರನ್ನ ಉತ್ಸವ ಯಶಸ್ಸಿಗೆ ರನ್ನಬೆಳಗಲಿ ಪಟ್ಟಣದ ಎಲ್ಲ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಜಮಖಂಡಿ ಉಪ ವಿಭಾಗಾಧಿಕಾರಿ ಶ್ವೇತಾ ಬೀಡಿಕರ ಮನವಿ ಮಾಡಿದರು.ರನ್ನಬೆಳಗಲಿ ಪಟ್ಟಣದ ಬಂದಲಕ್ಷ್ಮಿ ದೇವಸ್ಥಾನ ಆವರಣದಲ್ಲಿ ಶುಕ್ರವಾರ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ ಅವರು, ಬೆಳಗಲಿಯಲ್ಲಿ ಫೆ.೨೨, ಮುಧೋಳದಲ್ಲಿ ೨೩,೨೪ರಂದು ರನ್ನ ಉತ್ಸವ ಕಾರ್ಯಕ್ರಮ ನಡೆಯಲಿದೆ.