ಯಾರೋ ಕೂಗಿದ್ದಕ್ಕೆ ರಾಜಕಾರಣದಲ್ಲಿ ಬದಲಾಗಲ್ಲಕನ್ನಡಪ್ರಭ ವಾರ್ತೆ ವಿಜಯಪುರ ಯಾರೋ ಕೂಗಿದ ಕೂಡಲೇ ರಾಜಕಾರಣದಲ್ಲಿ ಬದಲಾವಣೆಯಾಗಿ ಬಿಡುತ್ತಾ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಪ್ರಶ್ನಿಸಿದರು. ಮುಂದಿನ ಸಿಎಂ ಡಿಕೆಶಿ ಎಂದು ಸಿದ್ದರಾಮಯ್ಯ ಎದುರು ಕೂಗಿದ್ದು ಸಿದ್ದರಾಮಯ್ಯಗೆ ಅವಮಾನ ಆಗಿದೆ ಎಂಬ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿಕೆ ಬಗ್ಗೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಿ.ಟಿ.ರವಿಗೆ ಟಾಂಗ್ ನೀಡಿದರು. ಅಲ್ಲಿ ಲಕ್ಷಾಂತರ ಜನ ಸೇರಿದ್ರು, ಯಾರೋ ಕೂಗಿಬಿಡುತ್ತಾರೆ, ಅದ್ಧರಿಂದ ಬದಲಾಗುತ್ತಾ?, ಸಿದ್ದರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ ಇದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಒಂದು ರೀತಿ ನೀತಿ ಇದೆ. ಸಿಎಂ, ಡಿಸಿಎಂ, ಸಚಿವರಾಗಿ ಯಾರನ್ನು ಮಾಡಬೇಕು, ಯಾರನ್ನ ಬದಲಾವಣೆ ಮಾಡಬೇಕು ಅಂತ ನಿರ್ಧರಿಸುವುದು ಹೈಕಮಾಂಡ್. ಯಾರೋ ನಾಲ್ಕು ಜನ ಕೂಗಿದ್ರೆ?, ಅಭಿಮಾನಕ್ಕೆ ಕೂಗುತ್ತಾರೆ ಎಂದು ಸ್ಪಷ್ಟನೆ ನೀಡಿದರು.