ಫಲಿತಾಂಶ ಸುಧಾರಣೆಗೆ ಕಾರ್ಯಪ್ರವೃತರಾಗಿಕನ್ನಡಪ್ರಭ ವಾರ್ತೆ ವಿಜಯಪುರ ಕಳೆದ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ವಿಜಯಪುರ ಜಿಲ್ಲೆಯೂ ಕುಸಿತ ಕಂಡಿದ್ದು, ಈ ವರ್ಷ ಆರಂಭದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಅಧಿಕಾರಿ ವರ್ಗ, ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಕಾರ್ಯಪ್ರವೃತರಾಗಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಸಹನಿರ್ದೇಶಕಿ ಮಂಗಲಾ ನಾಯಕ ಕರೆ ನೀಡಿದರು.