ಪಟ್ಟಣದಲ್ಲಿ ಅತ್ಯಾಧುನಿಕ ಮೆಗಾ ಮಾರ್ಕೆಟ್ ನಿರ್ಮಾಣಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪಟ್ಟಣದ ಹೃದಯಭಾಗದಲ್ಲಿ ಹಳೆ ಮಾರುಕಟ್ಟೆಯನ್ನು ತೆರವುಗೊಳಿಸಿದ ಅದೇ ಜಾಗದಲ್ಲಿ ಇದೀಗ ವಿನೂತನ ಅತ್ಯಾಧುನಿಕ ಸೌಲಭ್ಯಗಳುಳ್ಳ ಬೃಹತ್ ಮೆಗಾ ಮಾರ್ಕೆಟ್ ನಿರ್ಮಾಣಗೊಳ್ಳಲಿದೆ. ಕಾಮಗಾರಿಗೆ ಫೆ.27ಕ್ಕೆ ಅಡಿಗಲ್ಲು ಸಮಾರಂಭ ನೆರವೇರುತ್ತಿದ್ದು, ಈ ಕಾರ್ಯಕ್ಕೆ ಪಟ್ಟಣದ ಗಣ್ಯ ವ್ಯಾಪಾರಸ್ಥರು, ಉದ್ಯಮಿಗಳು, ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿದ್ದಾರೆ. ಮೆಗಾ ಮಾರ್ಕೆಟ್ ಬಹು ದಿನಗಳ ಜನರ ಕನಸಾಗಿದ್ದು, ಇದೀಗ ಶಾಸಕ ಹಾಗೂ ಕೆಎಸ್‌ಡಿಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಗಿ) ಅವರು ಈ ಕಾರ್ಯಕ್ಕೆ ಮುಂದಾಗಿದ್ದಾರೆ.