ಬೆಳಗಾವಿಯಲ್ಲಿ ಮೂರು ದಿನ ಎಐಸಿಸಿ ಅಧಿವೇಶನಕನ್ನಡಪ್ರಭ ವಾರ್ತೆ ವಿಜಯಪುರ ಬೆಳಗಾವಿಯಲ್ಲಿ ಡಿ.೨೭, ೨೮, ೨೯ ರಂದು ಎ.ಐ.ಸಿ.ಸಿ ಅಧಿವೇಶನದಲ್ಲಿ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಎಐಸಿಸಿ ಅಧಿವೇಶನ ನಡೆದು ೧೦೦ ವರ್ಷಗಳು ಸಂದಿರುವ ಸವಿನೆನಪಿಗಾಗಿ ರಾಜ್ಯದಲ್ಲಿ ೧೦೦ ಬ್ಲಾಕ್ ಕಾಂಗ್ರೆಸ್ ಕಚೇರಿಗಳನ್ನು ನಿರ್ಮಿಸಲಾಗುತ್ತಿದೆ.