ಲಾಠಿ ಚಾರ್ಜ್ ಖಂಡಿಸಿ ಸರ್ಕಾರದ ವಿರುದ್ಧ ಆಕ್ರೋಶಕನ್ನಡಪ್ರಭ ವಾರ್ತೆ ಇಂಡಿ ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ವೇಳೆ ನಡೆದ ಲಾಠಿ ಚಾರ್ಜ್ ಖಂಡಿಸಿ ಮತ್ತು ಮುಖ್ಯಮಂತ್ರಿಗಳು ಪಂಚಮಸಾಲಿ ಸಮುದಾಯ ಹಾಗೂ ಸ್ವಾಮೀಜಿಗಳ ಕ್ಷಮೆ ಕೇಳಬೇಕು, ಪ್ರತಿಭಟನಾಕಾರರ ಮೇಲೆ ಹಾಕಿದ ಕೇಸ್ಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಪಂಚಮಸಾಲಿ ಸಮುದಾಯದ ಇಂಡಿ ತಾಲೂಕು ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.