ಕಳಪೆ ತೊಗರಿ ಪರಿಹಾರಕ್ಕಾಗಿ ನಾಳೆ ಹೋರಾಟಕನ್ನಡಪ್ರಭ ವಾರ್ತೆ ತಾಳಿಕೋಟೆ: ಉತ್ತರ ಕರ್ನಾಟಕ ಭಾಗದಲ್ಲಿಯೇ ರೈತರು ವಾಣಿಜ್ಯ ಬೆಳೆಯನ್ನಾಗಿಸಿಕೊಂಡಿರುವ ತೊಗರಿ ಬೆಳೆಯು ಕಳಪೆ ಬೀಜದಿಂದ ಶೇ.೮೦ ರಷ್ಟು ಹಾನಿಯಾಗಿದ್ದು, ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಡಿ.೯ರಂದು ತಾಳಿಕೋಟೆ ನಗರದಲ್ಲಿ ಸುಮಾರು ೧೦ ರಿಂದ ೧೫ ಸಾವಿರ ರೈತರೊಂದಿಗೆ ದೊಡ್ಡ ಮಟ್ಟದ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರೈತ ಮೋರ್ಚಾದ ರಾಜ್ಯಾಧ್ಯಕ್ಷ, ಮಾಜಿ ಶಾಸಕ ಎ.ಎಸ್.ಪಾಟೀಲ(ನಡಹಳ್ಳಿ) ಹೇಳಿದರು.