4ನೇ ದಿನಕ್ಕೆ ಕಾಲಿಟ್ಟ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರಕನ್ನಡಪ್ರಭ ವಾರ್ತೆ ಇಂಡಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂಡಿ ತಾಲೂಕು ಗ್ರಾಮ ಆಡಳಿತಾಧಿಕಾರಿಗಳ ಸಂಘ ತಾಲೂಕು ಆಡಳಿತ ಸೌಧದ ಮುಂದೆ 2ನೇ ಹಂತದ ಅನಿರ್ದಿಷ್ಟಾವಧಿಯ ಮುಷ್ಕರ ಆರಂಭಿಸಿದ್ದು, ಮುಷ್ಕರ ಗುರುವಾರ 4ನೇ ದಿನಕ್ಕೆ ಕಾಲಿಟ್ಟಿದೆ. ಮುಷ್ಕರಕ್ಕೆ ತಾಪಂ ಮಾಜಿ ಸದಸ್ಯ ಗಣಪತಿ ಬಾಣಿಕೋಲ, ಡಿಎಸ್‌ಎಸ್ ತಾಲೂಕು ಸಂಚಾಲಕ ರಮೇಶ ನಿಂಬಾಳಕರ ತೆರಳಿ ಬೆಂಬಲ ಸೂಚಿಸಿದರು.