ಬಸವ ನಾಡಲ್ಲಿ ಇಂದು ಅದ್ಧೂರಿ ಅಕ್ಷರ ಜಾತ್ರೆಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಬಸವನನಾಡು ಬಸವನಬಾಗೆವಾಡಿಯಲ್ಲಿ ಇಂದು ಅಕ್ಷರ ಜಾತ್ರೆ ಜಾತ್ರೆ ನಡೆಯಲಿದೆ. ತಾಲೂಕಿನ 10ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತಾಲೂಕಿನ ಸುಕ್ಷೇತ್ರ ಇವಣಗಿ ಗ್ರಾಮದ ವರದಾನಿ ಲಕ್ಕಮ್ಮದೇವಿ ದೇವಸ್ಥಾನದ ಆವರಣದಲ್ಲಿ ವೇದಿಕೆಯನ್ನು ಸಿದ್ಧಗೊಳಿಸಲಾಗಿದೆ. ಸಮ್ಮೇಳನದ ಯಶಸ್ವಿಗೆ ಇವಣಗಿ ಗ್ರಾಮದ ಮುಖಂಡರು, ಗ್ರಾಮಸ್ಥರು, ಕಸಾಪ ಪದಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಮುಖ್ಯಸ್ಥರು, ಸಮ್ಮೇಳನದ ವಿವಿಧ ಸಮಿತಿಗಳ ಪದಾಧಿಕಾರಿಗಳು ಟೊಂಕಕಟ್ಟಿ ನಿಂತಿದ್ದಾರೆ. ಈಗಾಗಲೇ ಸಮ್ಮೇಳನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಇವಣಗಿ ಗ್ರಾಮವನ್ನು ಕನ್ನಡ ಬರಹಗಳಿಂದ ಹಾಗೂ ಸ್ವಾಗತ ಬ್ಯಾನರ್ಗಳಿಂದ ತುಂಬಿಸಲಾಗಿದೆ.