ತಾಲೂಕು ಸಮ್ಮೇಳನಕ್ಕೆ ಸಿದ್ದರಾಮ ಬಿರಾದಾರ ಸರ್ವಾಧ್ಯಕ್ಷಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ತಾಲೂಕಿನ ಸುಕ್ಷೇತ್ರ ಇವಣಗಿ ಗ್ರಾಮದಲ್ಲಿ ಡಿ.೨ ರಂದು ಹಮ್ಮಿಕೊಂಡಿರುವ ಬಸವನಬಾಗೇವಾಡಿ ತಾಲೂಕಿನ ಹತ್ತನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಮನಗೂಳಿ ಪಟ್ಟಣದ ಸಾಹಿತಿ, ಶಿಕ್ಷಕ ಸಿದ್ದರಾಮ ಈರಗೊಂಡಪ್ಪ ಬಿರಾದಾರ ಅವರನ್ನು ಆಯ್ಕೆ ಮಾಡಲಾಗಿದೆ. ಬುಧವಾರ ಸಂಜೆ ಸ್ಥಳೀಯ ಬಸವೇಶ್ವರ ದೇವಸ್ಥಾನ ಆವರಣದಲ್ಲಿರುವ ತಾಲೂಕು ಕಸಾಪ ಕಾರ್ಯಾಲಯದಲ್ಲಿ ಜರುಗಿದ ಆಯ್ಕೆ ಸಮಿತಿ ಸಭೆಯಲ್ಲಿ ಸಿದ್ದರಾಮ ಬಿರಾದಾರ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲೀಕಾರ ತಿಳಿಸಿದರು.