ರಾಜೀ ಸಂಧಾನ ಮೂಲಕ ೧೯೯೬ ಪ್ರಕರಣಗಳ ಇತ್ಯರ್ಥಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಪಟ್ಟಣದ ನ್ಯಾಯಾಲಯದ ಸಂಕೀರ್ಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ನಾಲ್ಕು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ಒಟ್ಟು ೮,೭೮೩ ಬಾಕಿಯಿರುವ ಪ್ರಕರಣಗಳಲ್ಲಿ ೨,೭೮೩ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಯಿತು. ಇದರಲ್ಲಿ ಒಟ್ಟು ೧,೯೯೬ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು.