4ನೇ ದಿನದತ್ತ ವಕ್ಫ್ ಹಠಾವೋ ಹೋರಾಟಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್ ಕಾಯ್ದೆ ರದ್ದು ಮಾಡುವಂತೆ ಆಗ್ರಹಿಸಿ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ನೇತೃತ್ವದಲ್ಲಿ ಡಿಸಿ ಕಚೇರಿ ಬಳಿ ನಡೆಯುತ್ತಿರುವ ಧರಣಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ಸಂಸದ ಪಿ.ಸಿ.ಗದ್ದಿಗೌಡರ, ಮಾಜಿ ಶಾಸಕ ವೀರಣ್ಣ ಚರಂತಿಮಠ ಸೇರಿದಂತೆ ಅನೇಕ ನಾಯಕರು ಧರಣಿಯಲ್ಲಿ ಪಾಲ್ಗೊಂಡಿದ್ದರು.ರಾತ್ರಿ ಪೂರ್ತಿ ಧರಣಿ ಸ್ಥಳದಲ್ಲೇ ಶೋಭಾ ಕರಂದ್ಲಾಜೆ ಹಾಗೂ ಶಾಸಕ ಯತ್ನಾಳ ಇದ್ದರು.