ಭೀರದೇವರ - ಪರಮಾನಂದ ದೇವರ ಜಾತ್ರೆ ಸಂಪನ್ನಕನ್ನಡಪ್ರಭ ವಾರ್ತೆ ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಅ.30ರಿಂದ ನ. 2ರ ವರೆಗೆ ಶ್ರೀ ಭೀರದೇವರ ಹಾಗೂ ಶ್ರೀ ಪರಮಾನಂದ ದೇವರ ಜಾತ್ರೆ ಅದ್ಧೂರಿಯಾಗಿ ನಡೆಯಿತು. ನಾಲ್ಕು ದಿನಗಳ ಕಾಲ ನಡೆದ ಭಂಡಾರದ ಒಡೆಯನ ಜಾತ್ರೆಗೆ ಕರ್ನಾಟಕ ಮಾತ್ರವಲ್ಲದೇ ಮಹಾರಾಷ್ಟ್ರ, ಗೋವಾ ಸೇರಿ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ಸಾಕ್ಷಿಯಾಗುವ ಮೂಲಕ ದೇವರ ಕೃಪೆಗೆ ಪಾತ್ರರಾದರು. ದೀಪಾವಳಿ ಅಮವಾಸ್ಯೆ ದಿನ ಭೀರದೇವರ ಹಾಗೂ ಪಾಡ್ಯಮಿ ದಿನ ಶ್ರೀ ಪರಮಾನಂದ ದೇವರ ಸಿಂಗಾರಗೊಂಡ ಚೌಕಿಯೊಂದಿಗೆ ಸಾರವಾಡ ಗೊಂಬೆ ಕುಣಿತ, ಕರಡಿ ಮಜಲು, ಡೊಳ್ಳು ವಾದ್ಯದೊಂದಿಗೆ ಭಕ್ತರ ಮನೆಗೆ ದರ್ಶನ ನೀಡುತ್ತ, ಗಂಗೆ ಸೀತಾಳದಲ್ಲಿ ಪೂಜೆ ಮುಗಿಸಿ, ಬಜಾರಕ್ಕೆ ಆಗಮನವಾಗುತ್ತದೆ.