ವಿಜಯೇಂದ್ರಗೆ ಬಿಜೆಪಿ ಸಂಘಟಿಸುವ ಶಕ್ತಿಯಿದೆ: ಸಂಸದ ರಾಘವೇಂದ್ರ

| Published : Nov 30 2023, 01:15 AM IST

ಸಾರಾಂಶ

ಕೇಂದ್ರ ಸರ್ಕಾರ ಅನೇಕ ಜನಪರ ಕಾರ್ಯಕ್ರಮ ನೀಡಿದೆ. ಅವುಗಳ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು. ಕೇಂದ್ರ ಸರ್ಕಾರದ ಯೋಜನೆಗಳು ಕಟ್ಟಕಡೆಯ ವ್ಯಕ್ತಿಗೆ ತಲುಪಬೇಕು. ನಮ್ಮ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಆಗುತ್ತಿದೆ. ನಮ್ಮ ಮುಂದಿನ ಯುವಪೀಳಿಗೆಗೆ ಮೂಲಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ದೇನೆ. ಮುಂದೆ ಯಡಿಯೂರಪ್ಪ ಅವರ ಆಸೆಯಂತೆ ಯುವಕರಿಗೆ ಉದ್ಯೋಗ ಸಿಗಬೇಕು. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ. ಮುಂದೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳಲ್ಲೂ ಯಶಸ್ವಿಯಾಗಬೇಕಿದೆ. ಮೊನ್ನೆಯಾದ ಸೋಲನ್ನು ಸುಳ್ಳು ಎಂಬುವುದನ್ನು ತೋರಿಸಬೇಕಿದೆ ಎಂದು ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ವಿಜಯೇಂದ್ರ ಅವರಿಗೆ ಪಕ್ಷವನ್ನು ಸಂಘಟಿಸುವ ಶಕ್ತಿ ಇದೆ ಎಂದ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಜಿಲ್ಲಾ ಬಿಜೆಪಿ ವತಿಯಿಂದ ನಗರದ ಪ್ರೇರಣಾ ಸಭಾಂಗಣದಲ್ಲಿ ಬುಧವಾರ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿ, ಇಡೀ ರಾಜಕೀಯ ವ್ಯವಸ್ಥೆಯಲ್ಲಿ ಎಚ್ಚರಿಕೆಯಿಂದ ಹೆಜ್ಜೆ ಇಡುವ ಸಂದರ್ಭವಿದೆ. ಪಕ್ಷ ಸಂಘಟಿತವಾಗಿದ್ದರೂ ನಾವು ಜಿಲ್ಲೆಯಲ್ಲಿ ಮೂರು ಸ್ಥಾನ ಕಳೆದುಕೊಂಡಿದ್ದೇವೆ. ನಮ್ಮ ವಿರುದ್ಧ ಎಲ್ಲ ಶಕ್ತಿಗಳು ಒಂದಾಗಿವೆ. ಎನ್‌ಡಿಎ ಸರ್ಕಾರ ಕಟ್ಟಿ ಹಾಕಲು ವಿರೋಧ ಪಕ್ಷಗಳು ಪ್ರಯತ್ನ ನಡೆಸುತ್ತಿವೆ. ಹಾಗಾಗಿ, ಕಾರ್ಯಕರ್ತರ ಮೇಲೆ ಸಾಕಷ್ಟು ಜವಾಬ್ದಾರಿ ಇದೆ ಎಂದರು.

ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಆಗಿದೆ. ಅಯೋಧ್ಯೆ ಶ್ರೀ ರಾಮ ಮಂದಿರದ ಕನಸು ನನಸಾಗುತ್ತಿದೆ. ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿ ಸ್ಥಾನದಲ್ಲಿ ಕೂರಬೇಕು ಅಂದರೆ, ನಮ್ಮ ರಾಜ್ಯದಿಂದ 28ಕ್ಕೆ 28 ಸ್ಥಾನಗಳನ್ನೂ ಗೆಲ್ಲಬೇಕಾಗಿದೆ. ಪಕ್ಷ ಅವಕಾಶ ಕೊಟ್ಟಿದೆ, ವಿಜಯೇಂದ್ರ ಅದನ್ನು ನಿಭಾಯಿಸುತ್ತಾರೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಅನೇಕ ಜನಪರ ಕಾರ್ಯಕ್ರಮ ನೀಡಿದೆ. ಅವುಗಳ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು. ಕೇಂದ್ರ ಸರ್ಕಾರದ ಯೋಜನೆಗಳು ಕಟ್ಟಕಡೆಯ ವ್ಯಕ್ತಿಗೆ ತಲುಪಬೇಕು. ನಮ್ಮ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಆಗುತ್ತಿದೆ. ನಮ್ಮ ಮುಂದಿನ ಯುವಪೀಳಿಗೆಗೆ ಮೂಲಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ದೇನೆ. ಮುಂದೆ ಯಡಿಯೂರಪ್ಪ ಅವರ ಆಸೆಯಂತೆ ಯುವಕರಿಗೆ ಉದ್ಯೋಗ ಸಿಗಬೇಕು. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ. ಮುಂದೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳಲ್ಲೂ ಯಶಸ್ವಿಯಾಗಬೇಕಿದೆ. ಮೊನ್ನೆಯಾದ ಸೋಲನ್ನು ಸುಳ್ಳು ಎಂಬುವುದನ್ನು ತೋರಿಸಬೇಕಿದೆ ಎಂದು ಕರೆ ನೀಡಿದರು.

- - - (-ಫೋಟೋ: ಬಿ.ವೈ.ರಾಘವೇಂದ್ರ)