ಸಾರಾಂಶ
ಸಂಸದ ಕೋಟ ಶ್ರೀನಿವಾಸ ಪೂಜಾರಿ, ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ಸೇರಿದಂತೆ ರಾಜ್ಯ ಮಟ್ಟದ ನಾಯಕರೂ ಸಮಾವೇಶದಲ್ಲಿ ಭಾಗವಹಿಸಿದ್ದಾರೆ ಎಂದರು.
ಕನ್ನಡಪ್ರಭ ವಾರ್ತೆ ಮಂಗಳೂರು
ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾದ ಕಾರಣ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಉಪ ಚುನಾವಣೆ ಸಲುವಾಗಿ ಅ.15ರಂದು ಬಂಟ್ವಾಳದ ಬಂಟರ ಭವನದಲ್ಲಿ ದ.ಕ. ಜಿಲ್ಲಾ ಮಟ್ಟದ ಬಿಜೆಪಿ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದ ಕೋಟ ಶ್ರೀನಿವಾಸ ಪೂಜಾರಿ, ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ಸೇರಿದಂತೆ ರಾಜ್ಯ ಮಟ್ಟದ ನಾಯಕರೂ ಸಮಾವೇಶದಲ್ಲಿ ಭಾಗವಹಿಸಿದ್ದಾರೆ ಎಂದರು.
ಅವಿಭಜಿತ ದ.ಕ. ಜಿಲ್ಲೆಯಲ್ಲಿ ಸುಮಾರು 6,040 ಮಂದಿ ಮತದಾರರಿದ್ದು, ಬಿಜೆಪಿ ಸಂಘಟನಾತ್ಮಕವಾಗಿ ಕೆಲಸ ಮಾಡುತ್ತಿದೆ ಎಂದರು.ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ಮಾತನಾಡಿ, ಕಾಂಗ್ರೆಸ್ ಶಾಸಕ ಕೋಳಿವಾಡ ಕೂಡ ಸಿದ್ದರಾಮಯ್ಯರ ಮೂಡಾ ಹಗರಣದ ಎಫೆಕ್ಟ್ ಹರಿಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣ ಎಂದಿದ್ದಾರೆ. ಈ ಉಪ ಚುನಾವಣೆ ಮುಂದಿನ ಚುನಾವಣೆಗಳಿಗೆ ದಿಕ್ಸೂಚಿಯಾಗಲಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್, ಪರಿಷತ್ ಮಾಜಿ ಸದಸ್ಯ, ಚುನಾವಣಾ ಉಸ್ತುವಾರಿ ಕ್ಯಾ.ಗಣೇಶ್ ಕಾರ್ಣಿಕ್, ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ವಿಕಾಸ್ ಪುತ್ತೂರು, ಯತೀಶ್ ಆರ್ವಾರ್, ರಾಕೇಶ್ ರೈ ಕಡೆಂಜಿ ಇದ್ದರು.