ಸಾರಾಂಶ
ಶಿಕಾರಿಪುರ: ಕ್ಷೇತ್ರ ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ 48ನೇ ಹುಟ್ಟುಹಬ್ಬವನ್ನು ಅಭಿಮಾನಿಗಳು, ಕಾರ್ಯಕರ್ತರು ಪಕ್ಷದ ಮುಖಂಡರು ವಿಶೇಷವಾಗಿ ಆಚರಿಸಿದರು. ದೇವಾಲಯದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಜತೆಗೆ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಣ್ಣು ವಿತರಿಸಿದರು.
ಶಿಕಾರಿಪುರ: ಕ್ಷೇತ್ರ ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ 48ನೇ ಹುಟ್ಟುಹಬ್ಬವನ್ನು ಅಭಿಮಾನಿಗಳು, ಕಾರ್ಯಕರ್ತರು ಪಕ್ಷದ ಮುಖಂಡರು ವಿಶೇಷವಾಗಿ ಆಚರಿಸಿದರು. ದೇವಾಲಯದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಜತೆಗೆ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಣ್ಣು ವಿತರಿಸಿದರು.
ನೂರಾರು ಕಾರ್ಯಕರ್ತರು, ಅಭಿಮಾನಿಗಳು ಶಾಸಕರ ಹುಟ್ಟುಹಬ್ಬ ಅಂಗವಾಗಿ ಬೆಳಗ್ಗೆ ಕ್ಷೇತ್ರ ದೇವತೆ ಶ್ರೀ ಹುಚ್ಚುರಾಯಸ್ವಾಮಿ ದೇವಸ್ಥಾನ, ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ತೆರಳಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಶ್ರೀ ಹುಚ್ಚುರಾಯಸ್ವಾಮಿ ಕೆರೆ ದಡದ ಭ್ರಾಂತೇಶ ಉದ್ಯಾನವನ ಹಾಗೂ ಹೆಲಿಪ್ಯಾಡ್‌ನಲ್ಲಿ 48 ವಿಶೇಷ ಸಸಿಗಳನ್ನು ನೆಡಲಾಯಿತು. ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಣ್ಣು ವಿತರಿಸಿದರು.ರಾಜ್ಯ ಉಗ್ರಾಣ ನಿಗಮ ಮಾಜಿ ಅಧ್ಯಕ್ಷ ಎಚ್.ಟಿ. ಬಳಿಗಾರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಡಿ.ಎಲ್. ಬಸವರಾಜ್, ತಾಲೂಕು ಬಿಜೆಪಿ ಅಧ್ಯಕ್ಷ ಹನುಮಂತಪ್ಪ, ಉಪಾಧ್ಯಕ್ಷ ವಸಂತಗೌಡ, ಪುರಸಭಾಧ್ಯಕ್ಷೆ ಶೈಲಾ ಮಡ್ಡಿ, ಮುಖಂಡ ಚನ್ನವೀರಪ್ಪ, ಎಸ್.ಎಸ್. ರಾಘವೇಂದ್ರ, ಪಾಲಾಕ್ಷಪ್ಪ ಭದ್ರಾಪುರ, ರಮೇಶ್ ನಾಯ್ಕ, ಯುವ ಮೋರ್ಚಾ ಅಧ್ಯಕ್ಷ ವೀರನಗೌಡ, ನಗರಾಧ್ಯಕ್ಷ ಪ್ರಶಾಂತ್ ಸಾಳುಂಕೆ, ಬೆಣ್ಣೆ ಪ್ರವೀಣ, ಮಂಜುನಾಥ್ ಜಮೀನ್ದಾರ್, ಪ್ರವೀಣ ಶೆಟ್ಟಿ, ಮಧು, ವಿನಯ ಸೇಬು, ಪ್ರಶಾಂತ್ ಪ್ರತಿಬಿಂಬ, ರೇಖಾ, ನೇತ್ರಾವತಿ, ಲೀಲಾವತಿ, ಲತಾ ಮತ್ತಿತರರು ಇದ್ದರು.
ಸಂಘಟನೆಗೆ ವಿಜಯೇಂದ್ರ ಅವಿರತ ಶ್ರಮ: ಗುರುಮೂರ್ತಿ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ ಎಂಎಡಿಬಿ ಮಾಜಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ ಮಾತನಾಡಿ, ಕಿರಿಯ ವಯಸ್ಸಿನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಹುದ್ದೆಗೇರಿದ ಶಾಸಕ ವಿಜಯೇಂದ್ರ ಸ್ವಸಾಮರ್ಥ್ಯದಿಂದ ಪಕ್ಷ ಸಂಘಟನೆ ಮೂಲಕ ಗುರುತಿಸಿಕೊಂಡಿದ್ದಾರೆ. ಭವಿಷ್ಯದಲ್ಲಿ ರಾಜ್ಯವನ್ನು ಮುನ್ನಡೆಸುವ ವಿಶ್ವಾಸ ಜನತೆಯಲ್ಲಿ ಮೂಡಿಸಿದ್ದಾರೆ. ರಾಜ್ಯಾದ್ಯಂತ ಪಕ್ಷ ಸಂಘಟನೆಗಾಗಿ ಶಕ್ತಿಮೀರಿ ಪ್ರಯತ್ನಿಸುತ್ತಿದ್ದಾರೆ. ವಿಜಯೇಂದ್ರ ನೇತೃತ್ವದಲ್ಲಿ ಶೀಘ್ರದಲ್ಲಿಯೇ ನಡೆಯಲಿರುವ 3 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲವು ಸಾಧಿಸುವುದು ಶತಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಪಕ್ಷ ಸಂಘಟನೆ ಜತೆಗೆ ಕ್ಷೇತ್ರದ ಬಗ್ಗೆ ಹೆಚ್ಚಿನ ಕಾಳಜಿ ಹೊಂದಿರುವ ಶಾಸಕರು, ಜನಸಾಮಾನ್ಯರ ಕಷ್ಟಗಳ ಬಗ್ಗೆ ಕೂಡಲೇ ಸ್ಪಂದಿಸುತ್ತಿದ್ದಾರೆ. ತಾಲೂಕಿನಲ್ಲಿ ಪಕ್ಷ ಸಂಘಟನೆ ಹೆಚ್ಚು ಸದೃಢಗೊಳಿಸುವ ನಿಟ್ಟಿನಲ್ಲಿ ಕೇಂದ್ರ ನಾಯಕರ ಸೂಚನೆ ಮೇರೆಗೆ ಕೈಗೊಳ್ಳಲಾದ ಸದಸ್ಯತ್ವ ಅಭಿಯಾನದಲ್ಲಿ ಇದೀಗ 51 ಸಾವಿರ ಸದಸ್ಯತ್ವ ಪೂರ್ಣಗೊಂಡಿದೆ. ಸದಸ್ಯತ್ವಕ್ಕಾಗಿ ಹಗಲಿರುಳು ಶ್ರಮಿಸಿದ ಮುಖಂಡರು, ಕಾರ್ಯಕರ್ತರು ಅಭಿನಂದನಾರ್ಹರು ಎಂದರು.