ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ವಿಜಯೇಂದ್ರ ಭೇಟಿ

| Published : Nov 20 2025, 01:30 AM IST

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ವಿಜಯೇಂದ್ರ ಭೇಟಿ
Share this Article
  • FB
  • TW
  • Linkdin
  • Email

ಸಾರಾಂಶ

ಪುತ್ತೂರು ವೆಂಕಟರಮಣ ದೇವಸ್ಥಾನದ ಮೈದಾನದಲ್ಲಿ ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮಕ್ಕೆ ಪಾಲ್ಗೊಳ್ಳಲು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪುತ್ತೂರಿಗೆ ಆಗಮಿಸಿದ್ದು, ಪ್ರಾರಂಭದಲ್ಲಿ ಹತ್ತೂರ ಒಡೆಯ ಪುತ್ತೂರಿನ ಮಹಾಲಿಂಗೇಶ್ವರನ ದೇವಸ್ಥಾನಕ್ಕೆ ಭೇಟಿ ನೀಡಿದರು. ಭೇಟಿ ನೀಡಿ ತುಪ್ಪ ದೀಪ ಬೆಳಗಿಸಿದರು.

ಕನ್ನಡಪ್ರಭ ವಾರ್ತೆ ಪುತ್ತೂರು

ಪುತ್ತೂರು ವೆಂಕಟರಮಣ ದೇವಸ್ಥಾನದ ಮೈದಾನದಲ್ಲಿ ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮಕ್ಕೆ ಪಾಲ್ಗೊಳ್ಳಲು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪುತ್ತೂರಿಗೆ ಆಗಮಿಸಿದ್ದು, ಪ್ರಾರಂಭದಲ್ಲಿ ಹತ್ತೂರ ಒಡೆಯ ಪುತ್ತೂರಿನ ಮಹಾಲಿಂಗೇಶ್ವರನ ದೇವಸ್ಥಾನಕ್ಕೆ ಭೇಟಿ ನೀಡಿದರು. ಭೇಟಿ ನೀಡಿ ತುಪ್ಪ ದೀಪ ಬೆಳಗಿಸಿದರು.ಈ ಸಂದರ್ಭ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ತುಪ್ಪದ ದೀಪ ಬೆಳಗಿಸಿ, ಎಳ್ಳೆಣ್ಣೆ ಸಮರ್ಪಣೆ ಮಾಡಿದರು.

ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಸಹಿತ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಪುತ್ತೂರು, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ನಗರಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ., ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರೆಮಾರು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಸನ್ನ ಮಾರ್ಥ, ಗ್ರಾಮಾಂತರ ಮಂಡಲ ಉಪಾಧ್ಯಕ್ಷ ವಿದ್ಯಾಧರ್ ಜೈನ್, ಜಿಲ್ಲೆಯ ಎಲ್ಲ ಶಾಸಕರು ಉಪಸ್ಥಿತರಿದ್ದರು.