ಸಾರಾಂಶ
ಮಠಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರನ್ನು ಪೀಠಾಧಿಪತಿ ಡಾ.ಸುಬುದೇಂದ್ರ ತೀರ್ಥರು ಫಲಮಂತ್ರಾಕ್ಷತೆ ವಿತರಿಸಿ ಆಶೀರ್ವದಿಸಿದರು.
ಕನ್ನಡಪ್ರಭ ವಾರ್ತೆ ರಾಯಚೂರು
ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾನುವಾರ ಭೇಟಿ ನೀಡಿದರು.ರಾಜ್ಯಾಧ್ಯಕ್ಷರಾದ ನಂತರ ಇದೇ ಮೊದಲ ಬಾರಿಗೆ ಸುಕ್ಷೇತ್ರ ಮಂತ್ರಾಲಯಕ್ಕೆ ಆಗಮಿಸಿದ ಬಿ.ವೈ. ವಿಜಯೇಂದ್ರ ಅವರು ಗ್ರಾಮದ ದೇವತೆ ಮಂಚಾಲಮ್ಮದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಶ್ರೀರಾಘವೇಂದ್ರ ಸ್ವಾಮಿಗಳ ಮೂಲಬೃಂದಾವನ ದರ್ಶನ ಪಡೆದು, ನಮಿಸಿದರು. ಬಳಿಕ ಶ್ರೀಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು. ಬಳಿಕ ಶ್ರೀಗಳು ಶ್ರೀಮಠದ ಸಂಪ್ರದಾಯದಂತೆ ವಿಜಯೇಂದ್ರ ಅವರಿಗೆ ಶಾಲು ಹಾಕಿ, ಫಲಮಂತ್ರಾಕ್ಷತೆ ಹಾಗೂ ಶ್ರೀಗುರುರಾಯರ ಚಿತ್ರ ನೆನಪಿನ ಕಾಣಿಕೆ ನೀಡಿ ಆಶೀರ್ವದಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಪಿ.ರಾಜೀವ್, ಗಿರೀಶ ಕನಕವೀಡು, ಶರಣು ಸೇರಿ ಅನೇಕರು ಇದ್ದರು.