ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಬ್ಯಾಟರಂಗೇಗೌಡರು ನಗರದ ಮರಳೂರು ರಿಂಗ್ ರಸ್ತೆ ಬಳಿ ನೂತನವಾಗಿ ನಿರ್ಮಿಸಿರುವ ಮನೆಗೆ ಶನಿವಾರ ಸಂಜೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಗಮಿಸಿ ಶುಭ ಕೋರಿದರು. ಈ ಸಂದರ್ಭದಲ್ಲಿ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಬಿ.ಸುರೇಶ್‌ಗೌಡ ಮತ್ತಿತರ ಮುಖಂಡರು ಹಾಜರಿದ್ದರು.
ಕನ್ನಡಪ್ರಭ ವಾರ್ತೆ, ತುಮಕೂರು
ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಬ್ಯಾಟರಂಗೇಗೌಡರು ನಗರದ ಮರಳೂರು ರಿಂಗ್ ರಸ್ತೆ ಬಳಿ ನೂತನವಾಗಿ ನಿರ್ಮಿಸಿರುವ ಮನೆಗೆ ಶನಿವಾರ ಸಂಜೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಗಮಿಸಿ ಶುಭ ಕೋರಿದರು. ಈ ಸಂದರ್ಭದಲ್ಲಿ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಬಿ.ಸುರೇಶ್‌ಗೌಡ ಮತ್ತಿತರ ಮುಖಂಡರು ಹಾಜರಿದ್ದರು.ಭಾನುವಾರ ಗೃಹ ಪ್ರವೇಶ ಕಾರ್ಯವಿದ್ದು ಮುನ್ನಾದಿನ ಆಗಮಿಸಿದ್ದ ವಿಜಯೇಂದ್ರ ಅವರು, ಬ್ಯಾಟರಂಗೇಗೌಡರು ಎಬಿವಿಪಿಯಲ್ಲಿ ಸಕ್ರಿಯವಾಗಿ ಕೆಲಸ ಮಾಡಿ ನಂತರ ಬಿಜೆಪಿ ಸೇರಿದರು. ಬಿಜೆಪಿಯ ಸಾಮಾನ್ಯ ಕಾರ್ಯಕರ್ತರಾಗಿ ನಿಷ್ಠೆ, ಪ್ರಮಾಣಿಕತೆಯಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡ ಇವರಿಗೆ ಪಕ್ಷ ಹಂತಹಂತವಾಗಿ ವಿವಿಧ ಸ್ಥಾನಗಳನ್ನು ನೀಡಿ ಗೌರವಿಸಿದೆ. ಪಕ್ಷದ ಬೆಳವಣಿಗೆಗೆ ಕೊಡುಗೆ ನೀಡಿದ್ದಾರೆ ಎಂದರು.
ಬ್ಯಾಟರಂಗೇಗೌಡರಿಗೆ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ನಾಯಕರ ಆಶೀರ್ವಾದವಿದೆ. ಅವರೊಂದಿಗೆ ನಿಕಟ ಸಂಪರ್ಕವಿದೆ, ಇವರ ರಾಜಕೀಯ ಜೀವನದಲ್ಲಿ ಮತ್ತಷ್ಟು ಉನ್ನತ ಸ್ಥಾನಮಾನಗಳು ದೊರೆಯಲಿ. ಬಿಜೆಪಿ ಕಾರ್ಯಕರ್ತರು ಬೆಳೆಯಬೇಕು. ನಿಷ್ಠೆಯಿಂದ ಸೇವೆ ಸಲ್ಲಿಸುವವರಿಗೆ ಪಕ್ಷದಲ್ಲಿ ಯಾವತ್ತೂ ಮಾನ್ಯತೆ ದೊರೆಯುತ್ತದೆ ಎಂದು ವಿಜಯೇಂದ್ರ ಹೇಳಿದರು.ಬ್ಯಾಟರಂಗೇಗೌಡರು ಹಾಗೂ ಅವರ ಪತ್ನಿ ಸುಮಲತಾ ಅವರು ವಿಜಯೇಂದ್ರ ಹಾಗೂ ಮುಖಂಡರಿಗೆ ಉಪಹಾರ ಬಡಿಸಿ ಆತಿಥ್ಯ ನೀಡಿದರು. ಜಿಲ್ಲಾ ಬಿಜೆಪಿ ಹಿರಿಯ ಉಪಾಧ್ಯಕ್ಷ ವೈ.ಎಚ್.ಹುಚ್ಚಯ್ಯ, ಪ್ರಧಾನ ಕಾರ್ಯದರ್ಶಿ ಸಂದೀಪ್‌ಗೌಡ, ಎಸ್.ಸಿ. ಮೋರ್ಚಾ ಜಿಲ್ಲಾಧ್ಯಕ್ಷ ಎಚ್.ಎ.ಆಂಜನಪ್ಪ, ರಾಜ್ಯ ಕಾರ್ಯದರ್ಶಿ ಓಂಕಾರ್, ಮುಖಂಡ ಪ್ರದೀಪ್‌ಕುಮಾರ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ನವಚೇತನ್, ಒಬಿಸಿ ಮೋರ್ಚಾ ಅಧ್ಯಕ್ಷ ಕೆ.ವೇದಮೂರ್ತಿ ಮೊದಲಾದವರು ರಾಜ್ಯಾಧ್ಯಕ್ಷರ ಜೊತೆ ಹಾಜರಿದ್ದರು.
