ನಾಪೋಕ್ಲು, ಹೊದ್ದೂರಿನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

| Published : Jan 20 2024, 02:00 AM IST

ನಾಪೋಕ್ಲು, ಹೊದ್ದೂರಿನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ
Share this Article
  • FB
  • TW
  • Linkdin
  • Email

ಸಾರಾಂಶ

ನಾಪೋಕ್ಲು ಹಾಗೂ ಹೊದ್ದೂರು ಗ್ರಾಮ ಪಂಚಾಯಿತಿಗಳಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಅಂಗವಾಗಿ ಸಾರ್ವಜನಿಕರಿಗೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿ ನೀಡಲಾಯಿತು. ರೈತರಿಗೆ ಅನುಕೂಲವಾಗುವ ಕಿಸಾನ್ ಡ್ರೋನ್ ಪ್ರದರ್ಶನ ಗಮನ ಸೆಳೆಯಿತು. ಪ್ರದರ್ಶನ ವ್ಯಾನ್ ನಲ್ಲಿ ವಿವಿಧ ಯೋಜನೆಗಳಿಗೆ ಸಂಬಂಧಿಸಿದ ವಿಡಿಯೋಗಳನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಾರ್ವಜನಿಕರಿಗೆ ಉಚಿತವಾಗಿ ಕ್ಯಾಲೆಂಡರ್, ಮಾಹಿತಿ ಕೈಪಿಡಿ ವಿತರಿಸಲಾಯಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಅಂಗವಾಗಿ ಶುಕ್ರವಾರ ಇಲ್ಲಿನ ಸಂತೆ ಮೈದಾನದಲ್ಲಿ ಸಾರ್ವಜನಿಕರಿಗೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿ ನೀಡಲಾಯಿತು.

ನಾಪೋಕ್ಲು ಹಾಗೂ ಹೊದ್ದೂರು ಗ್ರಾಮ ಪಂಚಾಯಿತಿಗಳಲ್ಲಿ ಯಾತ್ರೆ ನಡೆದಿದ್ದು ಜನರಿಗೆ ಆಯುಷ್ಮಾನ್ ಭಾರತ, ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ, ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ, ದೀನ್ ದಯಾಳ್ ಅಂತ್ಯೋದಯ ಯೋಜನೆ, ಪ್ರಧಾನಮಂತ್ರಿ ಅವಾಸ್ ಯೋಜನೆ ಗ್ರಾಮೀಣ ಪ್ರಧಾನ ಮಂತ್ರಿ ಉಜ್ವಲ ಯೋಜನೆ, ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ, ಕಿಸಾನ್ ಕ್ರೆಡಿಟ್ ಕಾರ್ಡ್, ಪೋಷಣ್‌ ಅಭಿಯಾನ್‌, ಜಲಜೀವನ್ ಮಿಷನ್, ಸ್ವಾಮಿತ್ವ ಯೋಜನೆ, ಜೀವನ್ ಜ್ಯೋತಿ ವಿಮಾ ಯೋಜನೆ, ಸುರಕ್ಷಾ ವಿಮಾ ಯೋಜನೆ ಅಟಲ್ ಪಿಂಚಣಿ ಯೋಜನೆ ಪ್ರಧಾನಮಂತ್ರಿ ಪ್ರಣಾಮ ಯೋಜನೆ ಮತ್ತು ಜ್ಞಾನ ಗೊಬ್ಬರಗಳ ಬಗ್ಗೆ ವಿವಿಧ ಇಲಾಖೆ ಹಾಗೂ ಬ್ಯಾಂಕಿನ ಅಧಿಕಾರಿಗಳು ಯೋಜನೆಯ ಸಮಗ್ರ ಮಾಹಿತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ 5 ಅರ್ಹ ಫಲಾನುಭವಿಗಳಿಗೆ ಅಡಿಗೆ ಅನಿಲ ಸಂಪರ್ಕ ನೀಡಲಾಯಿತು. ಈ ಸಂದರ್ಭ ವಿವಿಧ ಯೋಜನೆಯ ಫಲಾನುಭವಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ ಕೇಂದ್ರ

ಸರಕಾರದ ಯೋಜನೆಯ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿದರು .

ರೈತರಿಗೆ ಅನುಕೂಲವಾಗುವ ಕಿಸಾನ್ ಡ್ರೋನ್ ಪ್ರದರ್ಶನ ಗಮನ ಸೆಳೆಯಿತು. ಪ್ರದರ್ಶನ ವ್ಯಾನ್ ನಲ್ಲಿ ವಿವಿಧ ಯೋಜನೆಗಳಿಗೆ ಸಂಬಂಧಿಸಿದ ವಿಡಿಯೋಗಳನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಾರ್ವಜನಿಕರಿಗೆ ಉಚಿತವಾಗಿ ಕ್ಯಾಲೆಂಡರ್, ಮಾಹಿತಿ ಕೈಪಿಡಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ನಾಪೋಕ್ಲು ಗ್ರಾಮ ಪಂಚಾಯತಿ ಅಧ್ಯಕ್ಷ ವನಜಾಕ್ಷಿ ರೇಣುಕೇಶ್, ಉಪಾಧ್ಯಕ್ಷ ಕುಲ್ಲೆಟೀರ

ಹೇಮಾ ಅರುಣ್, ಲೀಡ್ ಬ್ಯಾಂಕ್ ಜಿಲ್ಲಾ ಪ್ರಭಾರ ಅಧಿಕಾರಿ ಸಿದ್ದರಾಮಯ್ಯ , ಕಾಫಿ ಬೋರ್ಡ್ ಜಿಲ್ಲಾ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ್, ಕೆನರಾ ಬ್ಯಾಂಕ್ ವಲಯ ಮುಖ್ಯಸ್ಥ ರಾಜೇಶ್ ಕುಮಾರ್ ವಿ., ನಬಾರ್ಡ್ ಜಿಲ್ಲಾ ಅಭಿವೃದ್ಧಿ ಅಧಿಕಾರಿ

ರಮೇಶ್ ಬಾಬು, ಭಾರತ್ ಪೆಟ್ರೋಲಿಯಂ ಅಧಿಕಾರಿ ನಿತಿನ್, ಕೆವಿಕೆ ಅಧಿಕಾರಿ ಸುರೇಶ್, ಲೀಡ್ ಬ್ಯಾಂಕ್ ಜಿಲ್ಲಾ ನೋಡಲ್ ಅಧಿಕಾರಿ, ವ್ಯವಸ್ಥಾಪಕ ಗಂಗಾಧರ ನಾಯಕ್ , ಸಿಬ್ಬಂದಿ ಹಾಗೂ ಫಲಾನುಭವಿಗಳು ಪಾಲ್ಗೊಂಡರು.

ಸಮೀಪದ ಬಲ್ಲಮಾವಟಿ ಗ್ರಾಮದಲ್ಲೂ ವಿಕಸಿತ್ ಭಾರತ ಸಂಕಲ್ಪ ಯಾತ್ರೆ ಅಂಗವಾಗಿ ಗುರುವಾರ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು . ಶನಿವಾರ ಬೇಂಗೂರು ಮತ್ತು ಬೆಟ್ಟಗೇರಿ ಗ್ರಾಮ ಪಂಚಾಯಿತಿಗಳಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ನಡೆಯಲಿದೆ.