ಸಾರಾಂಶ
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಗ್ರಾಮ ಆಡಳಿತ ಅಧಿಕಾರಿಗಳು ಕಪ್ಪುಬಟ್ಟೆ ಧರಿಸಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಟ್ಟಣದ ತಾಲೂಕು ಆಡಳಿತ ಸೌಧದ ಆವರಣದಲ್ಲಿ 2ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದರು.ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಹರೀಶ್ ಮುಷ್ಕರದ ನೇತೃತ್ವ ವಹಿಸಿ ಮಾತನಾಡಿ, ರಾಜ್ಯ ಸಂಘದ ನಿರ್ದೇಶನಂತೆ ಮುಷ್ಕರ ನಡೆಸಲಾಗುತ್ತಿದೆ. ನಮ್ಮ ನ್ಯಾಯಯುತವಾಗಿ ಕೂಡಲೇ ನಮ್ಮ ಪ್ರಮುಖ ಸಮಸ್ಯೆಗಳನ್ನು ಭರವಸೆ ನೀಡದೆ ಬೇಡಿಕೆಗಳನ್ನು ಸರ್ಕಾರ ಈ ಕೂಡಲೇ ಈಡೇರಿಸಬೇಕು ಎಂದು ಆಗ್ರಹಿಸಿದರು.
ಬಡವರ ಪರವಾಗಿ ನಾವುಗಳು ಕರ್ತವ್ಯ ನಿರ್ವಹಿಸುತ್ತಿದ್ದೇವೆ. ನಮ್ಮ ಕರ್ತವ್ಯ ಸಮಯದಲ್ಲಿ ಸೇವೆಗೆ ಅಗತ್ಯವಾಗಿರುವ ಸುಸಜ್ಜಿತ ಕಚೇರಿ, ಕುರ್ಚಿ, ಟೇಬಲ್, ಲ್ಯಾಪ್‌ಟಾಪ್, ಮೊಬೈಲ್, ಸಿಮ್, ಸ್ಕಾನರ್ ಸೌಲಭ್ಯ ಒದಗಿಸಬೇಕು. ಸೌಲಭ್ಯಗಳನ್ನು ನೀಡದೆ ನಿಗದಿತ ಸಮಯದಲ್ಲಿ ಕೆಲಸ ಮಾಡಲು ಸರ್ಕಾರ ಸಹಕಾರ ನೀಡಬೇಕು. ಸೇವಾ ಸೌಲಭ್ಯ ಮತ್ತು ಭದ್ರತೆ ನೀಡುತ್ತಿಲ್ಲ ಎಂದು ಆರೋಪಿಸಿದರು.ಪ್ರತಿಭಟನೆಗೆ ರೈತ ಸಂಘ ಬೆಂಬಲ ವ್ಯಕ್ತಪಡಿಸಿ ಪುಟ್ಟೇಗೌಡ ಭಾಗವಹಿಸಿದ್ದರು. ಸಂಘದ ಜಿಲ್ಲಾ ಉಪಾಧ್ಯಕ್ಷ ಸೋಮಾಚಾರಿ, ತಾಲೂಕು ಅಧ್ಯಕ್ಷ ದಶರಥ ಪೂಜಾರಿ, ಉಪಾಧ್ಯಕ್ಷೆ ಸಾವಿತ್ರಿ, ಕಾರ್ಯದರ್ಶಿ ಬಿ.ಹೊನ್ನೇಶ್, ಖಜಾಂಚಿ ಕಾವ್ಯಗೌಡ, ರಾಘವೇಂದ್ರ, ಸುಧಾಕರ ಸೇರಿದಂತೆ ವಿವಿಧ ಭಾಗಗಳ ಗ್ರಾಮ ಆಡಳಿತಧಿಕಾರಿಗಳು ಉಪಸ್ಥಿತರಿದ್ದರು. ನಂತರ ತಹಸೀಲ್ದಾರ್ ಡಾ.ಎಸ್.ಯು.ಅಶೋಕ್ ಅವರಿಗೆ ಮನವಿ ಪತ್ರ ಅರ್ಪಿಸಿದರು.
ಕಪ್ಪುಪಟ್ಟಿ ಧರಿಸಿ ಗ್ರಾಮ ಲೆಕ್ಕಾಧಿಕಾರಿಗಳ ಪ್ರತಿಭಟನೆಮಳವಳ್ಳಿ:
ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸರ್ಕಾರದ ವಿರುದ್ಧ ಕಂದಾಯ ಇಲಾಖೆ ಗ್ರಾಮಲೆಕ್ಕಾಧಿಕಾರಿಗಳು ಕಪ್ಪು ಪಟ್ಟಿ ಧರಿಸಿ ಪಟ್ಟಣದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.ಶಿರಸ್ತೇದಾರ್ ಗುರುಮೂರ್ತಿ ಒಂದು ತಿಂಗಳ ಕಾಲ ಪರಿವರ್ತನ ರಜೆ ನೀಡಬೇಕೆಂದು ಮನವಿ ನೀಡಿದ ಬಳಿಕ ಬೇಡಿಕೆ ಈಡೇರುವವರೆಗೂ ಕೆಲಸ ಸ್ಥಗಿತಗೊಳಿಸಿ ಹೋರಾಟ ಮಾಡಲಾಗುವುದಾಗಿ ಎಚ್ಚರಿಸಿದರು.
ತಾಲೂಕು ಅಧ್ಯಕ್ಷರಾದ ಮಧು ಮಾತನಾಡಿ, ನೌಕರರ ಬೇಡಿಕೆಗಳ ವಿಚಾರವಾಗಿ ಯಾವುದೇ ತೃಪ್ತಿಕರ ಕ್ರಮಗಳನ್ನು ಕೈಗೊಂಡಿಲ್ಲ. ಅಲ್ಲದೇ ಮುಷ್ಕರದ ಪೂರ್ವದ ಅವಧಿಗಿಂತಲೂ ಹೆಚ್ಚಿನ ಕಾರ್ಯದ ಒತ್ತಡ ಉಂಟಾಗಿದೆ. ಮೂಲ ಸೌಲಭ್ಯ ಸೇರಿದಂತೆ ಸೇವಾ ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಅನಿರ್ಧಿಷ್ಟ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.ಪ್ರತಿಭಟನೆಯಲ್ಲಿ ಸಂಘದ ಉಪಾಧ್ಯಕ್ಷೆ ರಂಜಿತಾ, ಕಾರ್ಯದರ್ಶಿ ಪ್ರವೀಣ್,ಖಜಾಂಚಿ ನಿರಂಜನ್, ನಂದೀಶ್, ಸೇರಿದಂತೆ ಇತರರು ಇದ್ದರು.