ಸಾರಾಂಶ
ರಸ್ತೆ ಅಗಲೀಕರಣ ಮತ್ತು ಸುಧಾರಣೆ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಚಾಲನೆ ನೀಡಿದರು.
ಕನ್ನಡಪ್ರಭ ವಾರ್ತೆ ಲೋಕಾಪುರ
ರಸ್ತೆಗಳು ಸುಧಾರಣೆ ಆದಾಗ ಮಾತ್ರ ಗ್ರಾಮಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ, ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.ಸಮೀಪದ ಬದನೂರ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ಸಹಯೋಗದಲ್ಲಿ ಅಂದಾಜು ₹7 ಕೋಟಿ ವೆಚ್ಚದಲ್ಲಿ ರಾಹೆ-೨೦ ರಿಂದ ಬದನೂರ-ಜುನ್ನೂರ ಜಿಲ್ಲಾ ಮುಖ್ಯ ರಸ್ತೆಯವರೆಗೆ ಸುಮಾರು ೪ ಕಿಮೀ ರಸ್ತೆ ಅಗಲೀಕರಣ ಮತ್ತು ಸುಧಾರಣೆ ಕಾಮಗಾರಿಯ ಭೂಮಿ ಪೂಜೆ ನೇರವೇರಿಸಿ ಮಾತನಾಡಿದರು. ರಸ್ತೆಗಳು ಉತ್ತಮವಾಗಿದ್ದರೆ ಮಾತ್ರ ರೈತರ ಹಾಗೂ ಸಾರ್ವಜನಿಕರು ವ್ಯವಹಾರ ಮತ್ತು ವಹಿವಾಟು ನಡೆಸಿ ಆರ್ಥಿಕವಾಗಿ ಸದೃಢರಾಗಲು ಸಾಧ್ಯ. ಆದ್ದರಿಂದ ಈ ಭಾಗದ ಜನರಿಗೆ ಅನೂಕೂಲವಾಗಲೆಂದು ರಸ್ತೆ ಅಗಲೀಕರಣ ಮತ್ತು ಸುಧಾರಣೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಕಾಮಗಾರಿಯು ಗುಣಮಟ್ಟದಿಂದ ನಿರ್ಮಾಣ ಮಾಡಲು ಗುತ್ತಿಗೆದಾರರಿಗೆ ತಿಳಿಸಿದರು.
ಈ ವೇಳೆ ಲೋಕಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕಿವಡಿ, ಬಿಡಿಸಿಸಿ ಬ್ಯಾಂಕ ಮಾಜಿ ಉಪಾಧ್ಯಕ್ಷ ಶಿವಾನಂದ ಉದಪುಡಿ, ಕೆಎಂಎಫ್ ನಿರ್ದೇಶಕ ಲಕ್ಷ್ಮಣ ಮಾಲಗಿ, ಸಂಜಯ ತಳೇವಾಡ, ವೆಂಕಣ್ಣ ಅಂಕಲಗಿ, ಲಕ್ಷ್ಮಣ ಸೊನ್ನದ, ಗಿರಿಯಪ್ಪ ಹುಡೇದ, ಹಣಮಂತ ಅಮ್ಮಲಝರಿ, ಸುಭಾಸ ಚಿತ್ತರಗಿ, ಲಕ್ಷ್ಮಣ ನಾಯಕ, ಮಾನಿಂಗಪ್ಪ ಹುಂಡೇಕಾರ, ಇಒ ಉಮೇಶ ಸಿದ್ನಾಳ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳಾದ ಚನ್ನಬಸವ ಮಾಚನೂರ, ಅಶೋಕ ಕ್ಯಾದಿಗೇರಿ ಗ್ರಾಪಂ ಕಾರ್ಯದರ್ಶಿ ಬಸವರಾಜ ಪೂಜಾರಿ ಹಾಗೂ ಗ್ರಾಮಸ್ಥರು ಇದ್ದರು.