ರೆಸಾರ್ಟ್‌ಗೆ ಅನುಮತಿ ನೀಡದಿರಲು ಗ್ರಾಮ ಹಿತರಕ್ಷಣಾ ಸಮಿತಿ ಆಗ್ರಹ

| Published : Oct 23 2024, 12:36 AM IST

ರೆಸಾರ್ಟ್‌ಗೆ ಅನುಮತಿ ನೀಡದಿರಲು ಗ್ರಾಮ ಹಿತರಕ್ಷಣಾ ಸಮಿತಿ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಬಲ್ಲಮಾವಟ್ಟಿ ಗ್ರಾಮ ಪಂಚಾಯಿತಿಯ ದೊಡ್ಡ ಪುಲಿಕೋಟು ಗ್ರಾಮದಲ್ಲಿ ನಿರ್ಮಾಣವಾಗಲಿರುವ ರೆಸಾರ್ಟ್‌ಗೆ ಅನುಮತಿ ನೀಡಬಾರದು ಎಂದು ಗ್ರಾಮ ಹಿತ ರಕ್ಷಣಾ ಸಮಿತಿಯ ಪದಾಧಿಕಾರಿಗಳು ಮಡಿಕೇರಿಗೆ ತೆರಳಿ ಜಿಲ್ಲಾಧಿಕಾರಿ, ತಹಸೀಲ್ದಾರ್‌, ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಇಲ್ಲಿಗೆ ಸಮೀಪದ ಬಲ್ಲಮಾವಟ್ಟಿ ಗ್ರಾಮ ಪಂಚಾಯಿತಿಯ ದೊಡ್ಡ ಪುಲಿಕೋಟು ಗ್ರಾಮದಲ್ಲಿ ನಿರ್ಮಾಣವಾಗಲಿರುವ ರೆಸಾರ್ಟ್‌ಗೆ ಅನುಮತಿ ನೀಡಬಾರದು ಎಂದು ಗ್ರಾಮ ಹಿತ ರಕ್ಷಣಾ ಸಮಿತಿಯ ಪದಾಧಿಕಾರಿಗಳು ಮಡಿಕೇರಿಗೆ ತೆರಳಿ ಜಿಲ್ಲಾಧಿಕಾರಿ, ತಹಸೀಲ್ದಾರ್‌, ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದರು.

ರೆಸಾರ್ಟ್‌ ಕುರಿತು ಸರ್ಕಾರದ ಉನ್ನತ ಅಧಿಕಾರಿಗಳಿಗೆ ಇದುವರೆಗೂ ಸಲ್ಲಿಸಿದ ಅರ್ಜಿಯ ಸ್ಥಿತಿಗತಿಯ ವಿವರ ಪಡೆದ ಗ್ರಾಮಸ್ಥರು ಗ್ರಾಮದಲ್ಲಿ ರೆಸಾರ್ಟಿಗೆ ಯಾವುದೇ ರೀತಿಯ ಅನುಮತಿ ನೀಡಬಾರದು ಎಂದು ಮನವಿ ಮಾಡಿದರು.

ಸಮಿತಿ ಸಂಚಾಲಕ ಕರವಂಡ ಲವ ನಾಣಯ್ಯ ಮಾತನಾಡಿ, ರೆಸಾರ್ಟ್ ನಿರ್ಮಾಣದಿಂದ ಗ್ರಾಮದಲ್ಲಿ ಸಮಸ್ಯೆಗಳು ಉದ್ಭವಿಸುತ್ತವೆ. ಸ್ವಚ್ಛ ಪರಿಸರಕ್ಕೆ ಧಕ್ಕೆಯಾಗುತ್ತದೆ. ಈ ರೀತಿಯ ಸಮಸ್ಯೆಗಳು ಆಗದಂತೆ ಗ್ರಾಮ ಸಭೆಯಲ್ಲಿ ಪಂಚಾಯಿತಿಯ ಮೂಲಕ ಗ್ರಾಮಸ್ಥರೆಲ್ಲರೂ ಸೇರಿ ರೆಸಾರ್ಟ್ ನಿರ್ಮಾಣಕ್ಕೆ ತಡೆಯೊಡ್ಡಲು ನಿರ್ಣಯ ಕೈಗೊಳ್ಳಲಾಗಿದೆ. ನಿರ್ಣಯ ಪ್ರತಿಯನ್ನು ಜಿಲ್ಲಾಧಿಕಾರಿ ಕಚೇರಿ, ತಹಸೀಲ್ದಾರ್ ಕಚೇರಿ, ಪ್ರವಾಸೋದ್ಯಮ ಇಲಾಖೆಗೆ ಸಲ್ಲಿಸಲಾಗಿದೆ ಎಂದರು.

ಬಲ್ಲಮಾವಟಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಚೋಕಿರ ಬಾಬಿ ಭೀಮಯ್ಯ, ಪಂಚಾಯತಿ ಸದಸ್ಯರಾದ ಮುಕ್ಕಾಟಿರ ಸುತನ್ ಸುಬ್ಬಯ್ಯ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.